ಶ್ರೀಬಡಗೂಡಮ್ಮದೇವಿ ಕೊಂಡೋತ್ಸವ

ನಾಗಮಂಗಲ ಪಟ್ಟಣದ ಅಧಿದೇವತೆ ಶ್ರೀಬಡಗೂಡಮ್ಮದೇವಿ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ರಥವನ್ನು ಎಳೆದರು.
ನಾಗಮಂಗಲ ಪಟ್ಟಣದ ಅಧಿದೇವತೆ ಶ್ರೀಬಡಗೂಡಮ್ಮದೇವಿ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ರಥವನ್ನು ಎಳೆದರು.
Published on
ನಾಗಮಂಗಲ: ಪಟ್ಟಣ ಸೇರಿದಂತೆ ನೆರೆಯ ಹತ್ತು ಗ್ರಾಮಗಳ ಅಧಿದೇವತೆ ಶ್ರೀಬಡಗೂಡಮ್ಮದೇವಿ ಕೊಂಡೋತ್ಸವ, ರಥೋತ್ಸವ ಹಾಗೂ ಜಾತ್ರಾಮಹೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ನೆರವೇರಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ ಒಂದು ವಾರದಿಂದ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿದವು. ಹೂವಿನಚಪ್ಪರ ಹಾಗೂ ಪಟ್ಟಣದ ಒಳಸುತ್ತಿನ ಮೆರವಣಿಗೆ, ಹತ್ತು ಹಳ್ಳಿಗಳ ಗ್ರಾಮಸ್ಥರಿಂದ ರಂಗಕುಣಿತ, ಪೂಜಾ ಕಾರ್ಯಗಳು, ಅಲಂಕಾರಭೂಷಿತಳಾದ ಶ್ರೀಬಡಗೂಡಮ್ಮದೇವಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.
ವಿವಿಧ ಸಂಘ ಸಂಸ್ಥೆಗಳು ಜಾತ್ರೆಗೆ ಬಂದಿದ್ದ ಭಕ್ತರಿಗೆ ಪಾನಕ ಹಾಗೂ ಮಜ್ಜಿಗೆ ವಿತರಿಸಿದರು. ಯಾವುದೇ ಅಹಿತಕರ ಘಟನೆಯಾಗದಂತೆ ಪಟ್ಟಣ ಠಾಣೆ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net