ಕ್ರೀಡಾಂಗಣಗಳ ನಿರ್ವಹಣೆ ಸಮರ್ಪಕವಾಗಿರಲಿ: ಜಿಲ್ಲಾಧಿಕಾರಿ ಡಾ.ಕುಮಾರ ನಿರ್ದೇಶನ

ಮಂಡ್ಯದಲ್ಲಿ ಡಿಸಿ ಡಾ.ಕುಮಾರ ನೇತೃತ್ವದಲ್ಲಿ ಕ್ರೀಡಾಂಗಣಗಳ ನಿರ್ವಹಣಾ ಸಮಿತಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಡಿಸಿ ಡಾ.ಕುಮಾರ ನೇತೃತ್ವದಲ್ಲಿ ಕ್ರೀಡಾಂಗಣಗಳ ನಿರ್ವಹಣಾ ಸಮಿತಿ ಸಭೆ ಆಯೋಜಿಸಲಾಗಿತ್ತು.
Published on

ಮಂಡ್ಯ: ಜಿಲ್ಲೆಯ ಕ್ರೀಡಾಂಗಣಗಳ ನಿರ್ವಹಣೆ, ಅಭಿವೃದ್ಧಿ ಹಾಗೂ ಕ್ರೀಡಾಪಟುಗಳಿಗೆ ಅಗತ್ಯ ಮೂಲಸೌಲಭ್ಯವನ್ನುಸಮರ್ಪಕವಾಗಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೀಡಾಂಗಣಗಳ ನಿರ್ವಹಣೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಶೌಚಗೃಹ ಸೇರಿದಂತೆ ಮೂಲ ಸೌಲಭ್ಯಗಳ ಬಗ್ಗೆ ಗಮನಹರಿಸಬೇಕು. ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಕ್ರೀಡಾಪಟುಗಳಿಗೆ ಉತ್ತಮ ವಾತಾವರಣ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಕ್ರೀಡಾಂಗಣಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳು, ನಿರ್ವಹಣೆಗೆ ಅಗತ್ಯ ಅನುದಾನ, ಕ್ರೀಡಾ ಪರಿಕರಗಳ ಸಂರಕ್ಷಣೆ ಹಾಗೂ ಸಾರ್ವಜನಿಕರ ಬಳಕೆಗೆ ಕ್ರೀಡಾಂಗಣಗಳನ್ನು ಸುಸಜ್ಜಿತವಾಗಿ ಕಾಯ್ದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮನುಜಶ್ರೀ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net