ಸಾಧಕರ ಅಧ್ಯಯನ ಅತ್ಯಗತ್ಯ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅಭಿಮತ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಹಾಗೂ ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚರತ್ನರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಉದ್ಘಾಟಿಸಿದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಹಾಗೂ ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚರತ್ನರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪಂಚರತ್ನರ ಪುತ್ಥಳಿ ಅನಾವರಣ
  • ಬೇಲೂರು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ
ಮಂಡ್ಯ: ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಾಧಕರ ಬಗ್ಗೆ ಯುವಸಮೂಹ ಅಧ್ಯಯನ ಮಾಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಸಲಹೆ ನೀಡಿದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಹಾಗೂ ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚರತ್ನರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಚರತ್ನಗಳಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ, ಭೈರವೈಕ್ಯ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ, ನಾಡಪ್ರಭು ಕೆಂಪೇಗೌಡ ಹಾಗೂ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರು ಸಾಧನೆಯ ಹಾದಿಯಲ್ಲಿ ಸಾಗಿ ಇತಿಹಾಸ ನಿರ್ಮಿಸಿದ್ದಾರೆ. ಇಂತಹ ಮಹನೀಯರ ಹಾದಿಯಲ್ಲಿ ಯುವ ಜನಾಂಗ ಸಾಗುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು ಕೇವಲ ಚುನಾವಣಾ ಆಧ್ಯತೆಯಾಗಬಾರದು. ಅದು ಪ್ರತಿಯೊಬ್ಬ ಜನಪ್ರತಿನಿಧಿಯ ಬದ್ಧತೆ ಮತ್ತು ಕರ್ತವ್ಯವಾಗಬೇಕು ಎಂದು ಕಿವಿಮಾತು ಹೇಳಿದ ಸಂಸದ ಯದುವೀರ್, ಮೈಸೂರು ಮತ್ತು ಮಂಡ್ಯ ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ. ಮೈಸೂರು ಸಂಸ್ಥಾನದ ಮೇಲೆ ಮಂಡ್ಯದ ಜನರಿಗೆ ವಿಶೇಷವಾದ ಪ್ರೀತಿ, ಅಭಿಮಾನ ಇದೆ. ಅದನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ, ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ಗ್ರಾಪಂ ಮಾಜಿ ಸದಸ್ಯ ಪಟೇಲ್ ಬಿ.ಕೆ.ಸತೀಶ್‌ಚಂದ್ರ, ಬಿ.ಡಿ.ಪುಟ್ಟಸ್ವಾಮಿ, ಬಿ.ಸಿ.ಸತೀಶ್, ಬಿ.ಸಿ.ಮಾಯಿಗಯ್ಯ, ಯಜಮಾನ್ ಚಿಕ್ಕಶಿವಪ್ಪ, ಚಿಕ್ಕರಾಮಣ್ಣ, ಶ್ರೀನಿವಾಸ್, ಬೊಮ್ಮೇಶ್, ಸರ್ವೇಶ್, ಕುಶ ಇತರರಿದ್ದರು.
ಗ್ರಾಪಂ ಮಾಜಿ ಸದಸ್ಯ ಪಟೇಲ್ ಬಿ.ಕೆ.ಸತೀಶ್‌ಚಂದ್ರ ಅವರು ಸಾಯಿ ಚಾರಿಟಬಲ್ ಟ್ರಸ್ಟ್‌ನಿಂದ ಬೇಲೂರು ಗ್ರಾಮದ ಕೆರೆಯಂಗಳದಲ್ಲಿ ನಿರ್ಮಾಣ ಮಾಡಿರುವ ಪಂಚರತ್ನರ ಪುತ್ಥಳಿ ಅನಾವರಣಗೊಳಿಸಲಾಯಿತು. ಅಂತೆಯೇ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಯದುವೀರ್ ಕೃಷ್ಣದತ್ತ ಒಡೆಯರ್ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆದೊಯ್ಯಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net