ನಾಲೆಗಳಿಗೆ ನೀರು ಹರಿಸಲು ಕ್ರಮ

ಶಾಸಕ ಕೆ.ಎಂ.ಉದಯ್
ಶಾಸಕ ಕೆ.ಎಂ.ಉದಯ್
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಹೇಳಿಕೆ
ಮದ್ದೂರು: ಜನ, ಜಾನುವಾರುಗಳಿಗೆ, ಕುಡಿಯುವ ನೀರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಗುರುವಾರ ಸಂಜೆಯಿಂದಲೇ ಕೆಆರ್‌ಎಸ್ ಅಣೆಕಟ್ಟೆಯಿಂದ ವಿಶ್ವೇಶ್ಚರಯ್ಯ ನಾಲೆಗಳಿಗೆ ನೀರು ಹರಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಮಳೆಯ ಅಭಾವದಿಂದ ಹಾಗೂ ಕೆಆರ್‌ಎಸ್.ಅಣೆಕಟ್ಟೆ ಭರ್ತಿಯಾಗದ ಹಿನ್ನೆಲೆಯಲ್ಲಿ ನೀರಿಗೆ ಸಮಸ್ಯೆ ಉಂಟಾಗಿತ್ತು. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಿಲ್ಲೆಯ ಶಾಸಕರು ನಾಲೆಗಳಿಗೆ ನೀರು ಹರಿಸುವಂತೆ ಮನವಿ ಮಾಡಲಾಗಿತ್ತು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಲ ಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿಯವರಿಗೆ ತಾಲೂಕಿನ ಜನತೆ ಪರವಾಗಿ ಶಾಸಕ ಕೆ.ಎಂ.ಉದಯ್ ಧನ್ಯವಾದ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net