ವಿದ್ಯಾರ್ಥಿಗಳೇ ದುಶ್ಚಟಗಳಿಗೆ ಬಲಿಯಾಗದಿರಿ

ಕುವೆಂಪು ಸಭಾಂಗಣದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಸರ್ಕಲ್  ಇನ್‌ಸ್ಪೆಕ್ಟರ್ ಅನಿಲ್ ಮಾತನಾಡಿದರು. ಜವರೇಗೌಡ, ಜಿ.ಬಿ.ಪಲ್ಲವಿ ಇತರರು ಇದ್ದರು.
ಕುವೆಂಪು ಸಭಾಂಗಣದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಸರ್ಕಲ್ ಇನ್‌ಸ್ಪೆಕ್ಟರ್ ಅನಿಲ್ ಮಾತನಾಡಿದರು. ಜವರೇಗೌಡ, ಜಿ.ಬಿ.ಪಲ್ಲವಿ ಇತರರು ಇದ್ದರು.
Published on
ಕೆ.ಎಂ.ದೊಡ್ಡಿ: ಮಕ್ಕಳು, ಯುವಜನಾಂಗ ಮಾದಕ ವಸ್ತುಗಳಿಂದ ದೂರವಿರುವ ನಿಟ್ಟಿನಲ್ಲಿ ಶಾಲಾ-ಕಾಲೇಜು ಹಂತದಲ್ಲೇ ಅರಿವು ಮೂಡಿಸುವುದು ಅಗತ್ಯ ಎಂದು ಡಿವೈಎಸ್ಪಿ ಯಶವಂತ್ ಅಭಿಪ್ರಾಯಪಟ್ಟರು.
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ಭಾರತೀ ಕಾಲೇಜಿನಲ್ಲಿ ಆಯೋಜಿಸಿದ್ದ ನೇರ ಪ್ರಸಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಲ್ಲಿ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಸರ್ಕಾರದಿಂದ ಈ ನೇರ ಪ್ರಸಾರದ ಕಾರ್ಯಕ್ರಮವನ್ನು ಕಾಲೇಜುಗಳಲ್ಲಿ ಆಯೋಜಿಸಲಾಗಿದೆ.
ಇತ್ತೀಚೆಗೆ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚಾಗಿ ದುಶ್ಚಟಗಳ ದಾಸರಾಗುತ್ತಿದ್ದಾರೆ. ಆರಂಭದಲ್ಲಿ ಮಕ್ಕಳಿಗೆ ಇದು ಖುಷಿ ಕೊಡುತ್ತದೆ ಎಂದು ನಂಬಿದ್ದಾರೆ. ಆದರೆ ಭವಿಷ್ಯದಲ್ಲಿ ಅವರನ್ನು ದೊಡ್ಡ ಅನಾಹುತಗಳಿಗೆ ದೂಡುತ್ತದೆ ಎಂದು ತಿಳಿಯಬೇಕು ಎಂದರು.
ಮಾದಕ ವಸ್ತುಗಳಿಗೆ ದಾಸರಾಗುತ್ತಿರುವ ಯುವಕರು, ಮಕ್ಕಳ ಭವಿಷ್ಯ ಹಾಳಾಗುವ ಜೊತೆಗೆ ಅವರ ಕುಟುಂಬದ ಮೇಲೆ ದುಷ್ಪರಿಣಾಮ ಬೀಳುತ್ತಿದೆ. ಈ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಿದರೆ ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು ಎಂದು ಕಿವಿಮಾತು ಹೇಳಿದರು.
ಸರ್ಕಲ್ ಇನ್‌ಸ್ಪೆಕ್ಟರ್ ಅನಿಲ್ ಮಾತನಾಡಿ, ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ವಿದ್ಯಾರ್ಥಿಗಳು ಪೊಲೀಸರೊಂದಿಗೆ ಕೈ ಜೋಡಿಸಬೇಕು. ನಿಮ್ಮ ಸ್ನೇಹಿತರು ಯಾರಾದರೂ ಈ ಮಾದಕ ವ್ಯಸನದಲ್ಲಿ ಭಾಗಿಯಾಗಿದ್ದರೆ ನಮ್ಮ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.
ಯಾರೇ ಆದರೂ ಅಕ್ರಮ ಚಟುವಟಿಕೆ, ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದರೆ ಅದು ದೊಡ್ಡ ಅಪರಾಧ. ಈ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರಿಯಬೇಕು. ಇಂತಹ ಕೃತ್ಯಗಳನ್ನು ಬುಡ ಸಹಿತ ಕಿತ್ತು ಹಾಕಲು ಪೊಲೀಸರ ಸಹಕಾರ ಸದಾ ಇರುತ್ತದೆ. ಇದಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಭಾರತೀ ಪಿಯು ಕಾಲೇಜಿನ ಆಡಳಿತಾಧಿಕಾರಿ ಜವರೇಗೌಡ, ಪ್ರಾಂಶುಪಾಲೆ ಜಿ.ಬಿ.ಪಲ್ಲವಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net