ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಗುರುವಾರ ಮತದಾರರ ಪಟ್ಟಿ ಎಸ್ಐಆರ್ ಕುರಿತು ಜಾಗೃತಿ ಜಾಥಾ ನಡೆಸಲಾಯಿತು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಎಸ್.ಪಿ.ರೈಮಂಡ್, ಪ್ರತಿಯೊಬ್ಬರೂ ಮತದಾರ ಪಟ್ಟಿಯಲ್ಲಿ ತಪ್ಪದೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಮನೆಗೆ ಭೇಟಿ ನೀಡುವ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿ ಅವರಿಗೆ ಸಹಕರಿಸಬೇಕು ಎಂದರು.
ನಗರದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಿ ಸಾರ್ವಜನಿಕರಲ್ಲಿ ಎಸ್ಐಆರ್ ಕುರಿತು ಜಾಗೃತಿ ಮೂಡಿಸಿದರು.
ರಾಜ್ಯಶಾಸ್ತ್ರ ಉಪನ್ಯಾಸಕಿ ಪವಿತ್ರಾ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಇತರರು ಇದ್ದರು.