ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ

ಮದ್ದೂರು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಟ್ಟಡ ನವೀಕರಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ಕೋಕಿಲಾ ಅರುಣ್, ಟಿ.ಆರ್.ಪ್ರಸನ್ನಕುಮಾರ್, ವನಿತಾ, ನಾರಾಯಣ್, ಬಸವರಾಜು ಇದ್ದರು.
ಮದ್ದೂರು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಟ್ಟಡ ನವೀಕರಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ಕೋಕಿಲಾ ಅರುಣ್, ಟಿ.ಆರ್.ಪ್ರಸನ್ನಕುಮಾರ್, ವನಿತಾ, ನಾರಾಯಣ್, ಬಸವರಾಜು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್
  • ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ
ಮದ್ದೂರು: ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬೇಕು ಎಂದು ಶಾಸಕ ಕೆ.ಎಂ.ಉದಯ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಟ್ಟಡ ನವೀಕರಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಸರ್ಕಾರದಿಂದ ನೂತನ ಕೊಠಡಿಗಳ ನಿರ್ಮಾಣ, ಪ್ರಯೋಗಾಲಯ, ಶೌಚಗೃಹ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಜತೆಗೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟು ವಿಶೇಷ ಅನುದಾನ ತಂದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರ ಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಾಜಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ವನಿತಾ, ಮಾಜಿ ಸದಸ್ಯರಾದ ಎಂ.ಬಿ.ಸಚಿನ್, ಬಸವರಾಜು, ಸಿದ್ದರಾಜು, ಪ್ರಮೀಳ, ಪ್ರಾಂಶುಪಾಲ ನಾರಾಯಣ, ಮುಖಂಡರಾದ ಎಂ.ಡಿ.ಮಹಾಲಿಂಗಯ್ಯ, ಮಹದೇವಯ್ಯ, ಸಂತೋಷ್, ಸಿದ್ದರಾಜು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net