ಅನುದಾನ ಬಿಡುಗಡೆ ಮಾಡಲು ಒತ್ತಾಯ: ತಾಪಂ ಇಒಗೆ ಮನವಿ ಸಲ್ಲಿಕೆ
ಮಂಡ್ಯತಾಲೂಕು ಪಂಚಾಯಿತಿ ಇಒ ಲೋಕೇಶ್‌ಮೂರ್ತಿ ಅವರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ(ಬಿ ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ(ಬಿ ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ಪದಾಧಿಕಾರಿಗಳ ಒತ್ತಾಯ
ಅನುದಾನ ಬಿಡುಗಡೆಯಾಗದಿರುವುದರಿಂದ ಅವರಿಗೆ ಬಾಕಿ ಪಾವತಿಸಲು ಸಾಧ್ಯವಾಗುತ್ತಿಲ್ಲವೆಂದು ಅಸಮಾಧಾನ
ಮಂಡ್ಯ: ಹದಿನೈದನೇ ಹಣಕಾಸು ಯೋಜನೆ ಅನುದಾನ ಬಿಡುಗಡೆಯಾಗದಿರುವುದರಿಂದ ಕುಡಿಯುವ ನೀರು ಮತ್ತು ಬೀದಿ ದೀಪಗಳ ನಿರ್ವಹಣೆಗೆ ಹಣವಿಲ್ಲದೆ ಆಡಳಿತ ನಡೆಸಲು ತೊಂದರೆಯಾಗುತ್ತಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ(ಬಿ ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ತಾಲೂಕು ಪಂಚಾಯಿತಿ ಕಚೇರಿಗೆ ಆಗಮಿಸಿದ ಪದಾಧಿಕಾರಿಗಳು ಇಒ ಲೋಕೇಶ್‌ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. ಅಂಗಡಿಗಳ ಮಾಲೀಕರಿಂದ 5 ರಿಂದ 20 ಲಕ್ಷ ರೂ.ಗಳವರೆಗೆ ಸಾಮಗ್ರಿಗಳನ್ನು ಸಾಲದ ರೂಪದಲ್ಲಿ ಖರೀದಿ ಮಾಡಲಾಗಿದೆ. ಅನುದಾನ ಬಿಡುಗಡೆಯಾಗದಿರುವುದರಿಂದ ಅವರಿಗೆ ಬಾಕಿ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ಬಾಕಿ ಪಾವತಿ ಮಾಡದ ಕಾರಣ ಅಂಗಡಿ ಮಾಲೀಕರು ಮತ್ತೆ ಸಾಮಗ್ರಿಗಳ ಖರೀದಿಗೆ ಸಾಲ ನೀಡದಿರುವುದರಿಂದ ಗ್ರಾಮಗಳಲ್ಲಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ 15ನೇ ಹಣಕಾಸು ಯೋಜನೆಯಡಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವೇ ಸಾಮಗ್ರಿಗಳನ್ನು ಖರೀದಿಸಲು ಅನುಕೂಲವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಜತೆಗೆ ಕೆಟಿಟಿಪಿ ಕಾಯ್ದೆಯಲ್ಲಿ ಸಾಮಗ್ರಿಗಳ ಖರೀದಿಗೆ ವಿಶೇಷ ಅನುಮತಿ ನೀಡುವುದು ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಸಂಘದ ಪದಾಧಿಕಾರಿಗಳಾದ ವಿನಯ್‌ಕುಮಾರ್, ಸುನಿಲ್‌ಕುಮಾರ್, ಕೃಷ್ಣೇಗೌಡ, ಪ್ರಸನ್ನ, ಅಶೋಕ್, ಶಿವಲಿಂಗಯ್ಯ ಇತರರಿದ್ದರು.