ಕಠಿಣ ಪರಿಶ್ರಮದಿಂದ ಯಶಸ್ಸು

ಮದ್ದೂರು ತಾಲೂಕಿನ ಚಿಕ್ಕಂಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಿಆರ್‌ಸಿ ಫೌಂಡೇಶನ್ ವತಿಯಿಂದ ಸಂಸ್ಥೆಯ ಅಧ್ಯಕ್ಷ ಬೆಟ್ಟಸ್ವಾಮಿ ಉಚಿತ ನೋಟ್ ಬುಕ್ ವಿತರಣೆ ಮಾಡಿದರು. ಮೂಡ್ಲಿಗೌಡ, ರವಿಕುಮಾರ್, ಕೆ.ಟಿ.ಉಮೇಶ್‌ಮೂರ್ತಿ, ನವೀನ್, ಗೌರಿಶಂಕರ್ ಇದ್ದರು.
ಮದ್ದೂರು ತಾಲೂಕಿನ ಚಿಕ್ಕಂಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಿಆರ್‌ಸಿ ಫೌಂಡೇಶನ್ ವತಿಯಿಂದ ಸಂಸ್ಥೆಯ ಅಧ್ಯಕ್ಷ ಬೆಟ್ಟಸ್ವಾಮಿ ಉಚಿತ ನೋಟ್ ಬುಕ್ ವಿತರಣೆ ಮಾಡಿದರು. ಮೂಡ್ಲಿಗೌಡ, ರವಿಕುಮಾರ್, ಕೆ.ಟಿ.ಉಮೇಶ್‌ಮೂರ್ತಿ, ನವೀನ್, ಗೌರಿಶಂಕರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಳಿಗೆ ಬಿಆರ್‌ಸಿ ಫೌಂಡೇಷನ್ ಅಧ್ಯಕ್ಷ ಬೆಟ್ಟಸ್ವಾಮಿ ಸಲಹೆ
ಮದ್ದೂರು: ವಿದ್ಯಾರ್ಥಿಗಳು ಸರ್ಕಾರ ಹಾಗೂ ಸಂಘ, ಸಂಸ್ಥೆಗಳು ನೀಡುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಬಿಆರ್‌ಸಿ ಫೌಂಡೇಷನ್ ಅಧ್ಯಕ್ಷ ಬೆಟ್ಟಸ್ವಾಮಿ ತಿಳಿಸಿದರು.
ತಾಲೂಕಿನ ಚಿಕ್ಕ ಅಂಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಿಆರ್‌ಸಿ ಫೌಂಡೇಶನ್ ವತಿಯಿಂದ ಇತ್ತೀಚೆಗೆ ಉಚಿತ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು.
ಪ್ರಪಂಚದಲ್ಲಿ ವಿದ್ಯೆಗೆ ಉನ್ನತ ಸ್ಥಾನವಿದ್ದು, ಇಂತಹ ವಿದ್ಯೆಯನ್ನು ಪಡೆದುಕೊಳ್ಳಬೇಕಾದರೆ ವಿದ್ಯಾರ್ಥಿಗಳು ನಿರಂತರವಾಗಿ ಕಠಿಣ ಶ್ರಮಪಟ್ಟು ವ್ಯಾಸಂಗ ಮಾಡಿಬೇಕು. ಆಗ ಸಮಾಜದಲ್ಲಿ ಉನ್ನತ ಸ್ಥಾನಮಾನಗಳನ್ನು ಪಡೆದು ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬಹುದು ಎಂದರು.
ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು. ಸರ್ಕಾರಿ ಶಾಲೆಯಲ್ಲಿ ಎಲ್ಲ ರೀತಿಯ ಸವಲತ್ತುಗಳಿದ್ದು, ನುರಿತ ಶಿಕ್ಷಕರಿಂದ ಗುಣಾತ್ಮಕ ಶಿಕ್ಷಣ ಸಿಗುತ್ತಿದೆ ಹಾಗೂ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಬಹುತೇಕರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಹೂತಗೆರೆ ಗ್ರಾಪಂ ವ್ಯಾಪ್ತಿಯ ಹಲವಾರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಿಆರ್‌ಸಿ ಫೌಂಡೇಷನ್ ವತಿಯಿಂದ ಉಚಿತ ನೋಟ್‌ಬುಕ್ ವಿತರಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ರವಿಕುಮಾರ್, ಮುಖ್ಯ ಶಿಕ್ಷಕಿ ದೀಪಾ, ಮೂಡ್ಲಿಗೌಡ, ಶಿಕ್ಷಕ ಕೆ.ಟಿ.ಉಮೇಶ್‌ಮೂರ್ತಿ, ನವೀನ್, ಶ್ರೀ ನಂದಿ ಬಸವೇಶ್ವರ ದೇಗುಲದ ಪ್ರಧಾನ ಅರ್ಚಕ ಗೌರಿಶಂಕರ್, ಎಸ್‌ಡಿಎಂಸಿ ಸದಸ್ಯೆ ಕೌಶಲ್ಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net