ಸಾಲಕ್ಕೆ ಆತ್ಮಹತ್ಯೆಯೇ ಪರಿಹಾರವಲ್ಲ

ಪಾಂಡವಪುರ ತಾಲೂಕಿನ ಎಂ.ಬೆಟ್ಟಹಳ್ಳಿ ಗ್ರಶಮದ ರೈತ ಸಾಲ ಭಾಧೆಯಿಂದ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಸಚಿವ ಚಲುವನಾರಾಯಣಸ್ವಾಮಿ ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಪಾಂಡವಪುರ ತಾಲೂಕಿನ ಎಂ.ಬೆಟ್ಟಹಳ್ಳಿ ಗ್ರಶಮದ ರೈತ ಸಾಲ ಭಾಧೆಯಿಂದ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಸಚಿವ ಚಲುವನಾರಾಯಣಸ್ವಾಮಿ ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಎನ್.ಚಲುವರಾಯಸ್ವಾಮಿ ಬೇಸರ

ಪಾಂಡವಪುರ:

ಎಂ. ಬೆಟ್ಟಹಳ್ಳಿ ಗ್ರಾಮದಲ್ಲಿ ಎಂ.ಎಸ್.ಸಾಲಭಾದೆಯಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಬೇಸರದ ಸಂಗತಿ. ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳಬಾರದು. ಸಾಲಕ್ಕೆ ಆತ್ಮಹತ್ಯೆಯೇ ಪರಿಹಾರವಲ್ಲ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು .

ತಾಲ್ಲೂಕಿನ ಎಂ.ಬೆಟ್ಟಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಹಾಗೂ ಹೋರಾಟಗಾರ ದಿ.ಎಂ.ಎಸ್.ಮಂಜುನಾಥ್ ಮನೆಗೆ ಭಾನುವಾರ ಭೇಡಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ರೂ.5ಲಕ್ಷ ಪರಿಹಾರ ಚೆಕ್ ನೀಡಿದ ಬಳಿಕ ಮಾತನಾಡಿದರು.
ರೈತರ ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿಯೇ ನಮ್ಮ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರೊಂದಿಗೆ ನಾವಿದ್ದೇವೆ. ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕುಮಾರ, ಜಿ.ಪಂ.ಸಿಇಓ ಕೆ.ಆರ್.ನಂದಿನಿ, ಉಪ ವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಸೀಲ್ದಾರ್ ಜಿ.ಆದರ್ಶ, ತಾ.ಪಂ.ಇಒ ಎಂ.ಎಸ್.ವೀಣಾ, ಕೆಪಿಸಿಸಿ ಸದಸ್ಯ ಬಿ.ರೇವಣ್ಣ, ರೈತ ಸಂಘದ ಮುಖಂಡ ರಾಘವ ಪ್ರಕಾಶ, ಕಾಂಗ್ರೆಸ್ ಮುಖಂಡರಾದ ಬಿ.ಟಿ.ಮಂಜುನಾಥ್, ದೀಪು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net