ಸೂಳೆಕೆರೆ ಜೀರ್ಣೋದ್ಧಾರ, ನಾಲೆಗಳ ಆಧುನೀಕರಣ ಕಾಮಗಾರಿಗೆ ಚಾಲನೆ

ಕೆ.ಎಂ.ದೊಡ್ಡಿ ಸಮೀಪದ ಮುಟ್ಟನಹಳ್ಳಿ ಗ್ರಾಮದ ಬಳಿ ಇರುವ ಸೂಳೆಕೆರೆ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಶಾಸಕ ಕದಲೂರು ಉದಯ್ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆಗೂಡಿ ಸ್ಥಳ ಪರಿಶೀಲಿಸಿ, ಕೆರೆ ವೀಕ್ಷಿಸಿದರು.
ಕೆ.ಎಂ.ದೊಡ್ಡಿ ಸಮೀಪದ ಮುಟ್ಟನಹಳ್ಳಿ ಗ್ರಾಮದ ಬಳಿ ಇರುವ ಸೂಳೆಕೆರೆ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಶಾಸಕ ಕದಲೂರು ಉದಯ್ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆಗೂಡಿ ಸ್ಥಳ ಪರಿಶೀಲಿಸಿ, ಕೆರೆ ವೀಕ್ಷಿಸಿದರು.
Published on

ಅಧಿಕಾರಿಗಳ ಜತೆಗೂಡಿ ಸ್ಥಳ ಪರಿಶೀಲಿಸಿದ ಶಾಸಕ ಕದಲೂರು ಉದಯ್

ಕೆ.ಎಂ.ದೊಡ್ಡಿ: ರೈತರ ದೀರ್ಘಕಾಲದ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸೂಳೆಕೆರೆ ಜೀರ್ಣೋದ್ಧಾರ, ಒತ್ತುವರಿ ತೆರವು ಹಾಗೂ ನಾಲೆಗಳ ಆಧುನೀಕರಣ ಕಾಮಗಾರಿಗೆ ಜ.18 ರಂದು ಚಾಲನೆ ನೀಡಲಾಗುವುದು ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಸಮೀಪದ ಮುಟ್ಟನಹಳ್ಳಿ ಗ್ರಾಮದ ಬಳಿ ಇರುವ ಸೂಳೆಕೆರೆ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಅಧಿಕಾರಿಗಳ ಜತೆಗೂಡಿ ಸ್ಥಳ ಪರಿಶೀಲನೆ ಹಾಗೂ ಕೆರೆ ವೀಕ್ಷಣೆ ನಡೆಸಿ ಮಾತನಾಡಿದ ಅವರು, ಸಿ.ಎ ಹೋಬಳಿಯ ಬಹುತೇಕ ಗ್ರಾಮಗಳ ರೈತರ ಜೀವನಾಡಿ ಸೂಳೆಕೆರೆ ಅಭಿವೃದ್ಧಿಗೆ ಹೆಚ್ಚನ ಆಧ್ಯತೆ ನೀಡಲಾಗುವುದು ಎಂದರು.
ರೈತರ ಹಿತವೇ ನಮ್ಮ ಬದ್ಧತೆ ಎಂದು ಭಾವಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಾಲೂಕಿನ ರೈತರ ಹಿತ ಕಾಯಲು ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಿದ್ದು ಮದ್ದೂರು ಕ್ಷೇತ್ರದ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶೇಷವಾಗಿ 800 ಕೋಟಿ ರೂ.ಗೂ ಹೆಚ್ಚಿನ ಅನುದಾನ ನೀಡಿ ಕ್ಷೇತ್ರದ ರೈತರ ಹಿತಕ್ಕೆ ನನ್ನ ಜತೆ ಕೈ ಜೋಡಿಸಿದ್ದಾರೆ ಎಂದರು.
ಸೂಳೆಕೆರೆ ಜೀರ್ಣೋದ್ಧಾರ ಯೋಜನೆಯೂ ಸುಮಾರು 34 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯೂ ಕಾರ್ಯಾರಂಭಗೊಳ್ಳುತ್ತದೆ. ಕೆರೆಯ ಒಟ್ಟು ವಿಸ್ತೀರ್ಣ 845 ಎಕರೆ 34 ಗುಂಟೆಯಾಗಿದ್ದು ಸುಮಾರು 6,630 ಎಕರೆ ಅಚ್ಚುಕಟ್ಟು ಪ್ರದೇಶವನ್ನು ಒಳಗೊಂಡಿದೆ ಎಂದರು.
ಕೆರೆಯಲ್ಲಿ ಹೂಳು ತೆಗೆಯುವಿಕೆ, ಕೆರೆ ಒತ್ತುವರಿ ತೆರವು ಕಾರ್ಯ, ಕಾಲುವೆಗಳ ನಿರ್ಮಾಣ, ಕೆರೆ ಏರಿ ಅಭಿವೃದ್ಧಿ, ಹೆಬ್ಬಾಳ ಹಳ್ಳ ತಡೆಗೋಡೆ (450 ಮೀ.) ಸಾರ್ವಜನಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕೆರೆಯನ್ನು ಸೌಂದರ್ಯೀಕರಣಗೊಳಿಸಲಾಗುವುದು ಎಂದು ತಿಳಿಸಿದರು.
ಅಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ರೈತರು ಸಾರ್ವಜನಿಕರು ಅಭಿವೃದ್ಧಿಗಾಗಿ ಸಹಕರಿಸಬೇಕು ಎಂದು ತಿಳಿಸಿದರು.
ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಮದ್ದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಬಸವರಾಜು, ಗ್ರಾಪಂ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಚಂದ್ರಶೇಖರ್, ಸುರೇಶ್, ಮುಟ್ಟನಹಳ್ಳಿ ಮಹೇಂದ್ರ ಸೇರಿದಂತೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net