ಗುಣಮಟ್ಟದ ಹಾಲು ಪೂರೈಕೆ ಮಾಡಿ

 ತಾಲೂಕಿನ ಕಸಬಾ ಹೋಬಳಿಯ ಸಾಧುಗೋನಹಳ್ಳಿ ಗ್ರಾಮದ ಹಾಲು ಉತ್ಪದಕಾರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯನ್ನು ಮನ್ಮುಲ್ ನಿರ್ದೇಶಕ ಡಾಲು ರವಿ ಉದ್ಘಾಟಿಸಿದರು.ಪದ್ಮ ಅಣ್ಣೇಗೌಡ ಪಾರ್ವತಮ್ಮ ರಂಗೇಗೌಡ ಇತರರಿದ್ದರು.
ತಾಲೂಕಿನ ಕಸಬಾ ಹೋಬಳಿಯ ಸಾಧುಗೋನಹಳ್ಳಿ ಗ್ರಾಮದ ಹಾಲು ಉತ್ಪದಕಾರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯನ್ನು ಮನ್ಮುಲ್ ನಿರ್ದೇಶಕ ಡಾಲು ರವಿ ಉದ್ಘಾಟಿಸಿದರು.ಪದ್ಮ ಅಣ್ಣೇಗೌಡ ಪಾರ್ವತಮ್ಮ ರಂಗೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮನ್ಮುಲ್ ನಿರ್ದೇಶಕ ಡಾಲು ರವಿ ಅಭಿಮತ
  • ಸರ್ವ ಸದಸ್ಯರ ವಾರ್ಷಿಕ ಸಭೆ
ಕೆ.ಆರ್.ಪೇಟೆ: ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಮನ್ಮುಲ್ ನಿರ್ದೇಶಕ ಡಾಲು ರವಿ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿಯ ಸಾಧುಗೋನಹಳ್ಳಿ ಗ್ರಾಮದ ಹಾಲು ಉತ್ಪದಕಾರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ರೈತರನ್ನು ಹೈನೋದ್ಯಮ ಉಳಿಸಿಕೊಂಡು ಬರುತ್ತಿದೆ ಯಾವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಇರುವುದಿಲ್ಲ.ಆ ಗ್ರಾಮಗಳಲ್ಲಿ ರೈತರ ಅಭಿವೃದ್ಧಿ ಸಾಧ್ಯವಿಲ್ಲ. ಜಿಲ್ಲೆಯಲ್ಲೇ ನಮ್ಮ ತಾಲೂಕು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದೆ. ನಂದಿನಿ ಹಾಲು ದೇಶದಲ್ಲಿ ಅಷ್ಟೇ ಅಲ್ಲದೆ, ಹೊರ ದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಹಾಲು ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಮಾರುಕಟ್ಟೆಯಲ್ಲಿ ಗುಣಮಟ್ಟದ ನಂದಿನಿ ಹಾಲು ಹಾಗೂ ಅದರ ಉತ್ಪನ್ನ ಕಡಿಮೆ ಬೆಲೆ ದೊರೆಯುತ್ತವೆ. ಪ್ರತಿಯೊಬ್ಬರು ನಂದಿನಿ ಉತ್ಪನ್ನ ಬಳಸಿದರೆ ಪರೋಕ್ಷವಾಗಿ ರೈತರಿಗೆ ಹೆಚ್ಚು ಬೆಂಬಲ ನೀಡಿದಂತಾಗುತ್ತದೆ. ಹಾಲು ಉತ್ಪಾದಿಸುವ ರೈತರು ನಂದಿನಿ ಹಾಲಿನ ಉತ್ಪನ್ನ ಬಳಸಬೇಕು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ಪದ್ಮ ಅಣ್ಣೇಗೌಡ, ಸದಸ್ಯರ ಸಹಕಾರದಿಂದ ಸಂಘ ಲಾಭದಾಯಕವಾಗಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಹಾಲು ಶೇಖರಣೆ ಹೆಚ್ಚಿಸಲು, ಸದಸ್ಯರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
2025-26ನೇ ಸಾಲಿನಲ್ಲಿ ಸಂಘಕ್ಕೆ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಪ್ರಥಮ ಮೂವರು ಉತ್ಪಾದಕರಿಗೆ ಮನ್ಮುಲ್ ನಿರ್ದೇಶಕ ಡಾಲು ರವಿ ಸನ್ಮಾನಿಸಿದರು.
ಮನ್ಮುಲ್ ವಿಸ್ತರಣಾಧಿಕಾರಿಗಳಾದ ನಾಗಪ್ಪ ಅಲ್ಲಿಬಾದಿ, ಈ ವರ್ಷದ ಆಯ್ಯವ್ಯಯ ಮತ್ತು ಮುಂದಿನ ವರ್ಷದ ಬಜೆಟ್‌ನ್ನು ಮಂಡಿಸಿ.
ಸಂಘದ ಉಪಾಧ್ಯಕ್ಷೆ ಪಾರ್ವತಮ್ಮ ರಂಗೇಗೌಡ, ನಿರ್ದೇಶಕರಾದ ಅನಿತಾ ಮಂಜೇಗೌಡ, ಆಶಾ ಶ್ರೀನಿವಾಸ್, ಚಂದ್ರಕಲಾ ರಾಜು, ಅನ್ನಪೂರ್ಣಾ ನಂಜೇಗೌಡ, ರೇಖಾ ಲೋಕೇಶ್, ಪ್ರೇಮಾ ಚಂದ್ರಹಾಸೆಗೌಡ, ಹೇಮಾ ಮಂಜು, ಗೀತಾ ಶೇಖರೇಗೌಡ, ದಿವ್ಯಾ ರಾಮೇಗೌಡ, ಗ್ರಾ.ಪಂ ಸದಸ್ಯ ಆರ್ ಕುಮಾರ್, ಯುವ ಮುಖಂಡರಾದ ಉದ್ಯಮಿ ಎಸ್.ಎಂ. ಲೋಕೇಶ್, ಸುರೇಶ, ಲೋಕೇಶ್,ಸಂಘದ ಕಾರ್ಯದರ್ಶಿ ಪವಿತ್ರಾ ತಿಮ್ಮೆಗೌಡ,ಹಾಲು ಪರೀಕ್ಷಕಿ ರಮ್ಯ,ಸಹಾಯಕಿ ಶೋಭ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net