12, 13 ರಂದು ವಿಚಾರ ಸಂಕಿರಣ

ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಆರ್.ಕೆ. ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ರಾಮಕೃಷ್ಣ
ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಆರ್.ಕೆ. ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ರಾಮಕೃಷ್ಣ
Published on

ಪ್ರಮುಖ ಮುಖ್ಯಾಂಶಗಳು

  • ಕೆ.ಹೊನ್ನಲಗೆರೆ ಗ್ರಾಮದ ಆರ್.ಕೆ. ಪ್ರಥಮ ದರ್ಜೆ ಕಾಲೇಜು
  • ಬಹುರೂಪಿ ಗಾಂಧಿ-ಗಾಂಧೀಜಿ ಅವರ ಬಹುಮುಖಿ ವ್ಯಕ್ತಿತ್ವ ಮತ್ತು ಚಿಂತನೆಗಳ ಪ್ರಸ್ತುತತೆ’ ಕುರಿತು ವಿಚಾರ ಸಂಕಿರಣ
ಮದ್ದೂರು: ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಆರ್.ಕೆ. ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು ಇವರ ಸಹಯೋಗದೊಡನೆ ಡಿ.12 ಮತ್ತು 13ರಂದು ಎರಡು ದಿನಗಳ ಕಾಲ ’ಬಹುರೂಪಿ ಗಾಂಧಿ-ಗಾಂಧೀಜಿ ಅವರ ಬಹುಮುಖಿ ವ್ಯಕ್ತಿತ್ವ ಮತ್ತು ಚಿಂತನೆಗಳ ಪ್ರಸ್ತುತತೆ’ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ಬಿ.ರಾಮಕೃಷ್ಣ ತಿಳಿಸಿದ್ದಾರೆ.
ಡಿ.12ರಂದು ಬೆಳಗ್ಗೆ 10.30ಕ್ಕೆ ನಡೆಯುವ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ.ವೊಡೇ ಪಿ.ಕೃಷ್ಣ ಅವರು ಉದ್ಘಾಟಿಸಲಿದ್ದು, ಸಂಸ್ಥೆ ಅಧ್ಯಕ್ಷ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರಸಂಸ್ಥೆಯ ಕಾರ್ಯದರ್ಶಿ ಸರೋಜಮ್ಮ ತುಳಸಿದಾಸ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಗೌರವ ಕಾರ್ಯದರ್ಶಿ ಎಂ.ಸಿ.ನರೇಂದ್ರ, ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಹಾಗೂ ಆರ್.ಕೆ. ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ವಿನಯ್‌ರಾಮಕೃಷ್ಣ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಸಿ.ಸತೀಶ್‌ಬಾಬು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲ ಗೋಷ್ಠಿಯಲ್ಲಿ ಸತ್ಯ ಮತ್ತು ಅಹಿಂಸೆ ಜತೆಗಿನ ಪ್ರಯೋಗಗಳು ಗಾಂಧೀಜಿ ಕುರಿತು ಹಾಸನ ಜಿಲ್ಲೆಯ ಆಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ರೋಹಿತ್, ವಿಶ್ರಾಂತ ಪ್ರಾಂಶುಪಾಲೆ ಡಾ.ಲೀಲಾ ಅಪ್ಪಾಜಿ ಅವರು ಯಶೋಧರಮ್ಮ ದಾಸಪ್ಪ ಒಂದು ಸಂಸ್ಮರಣೆ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಶಂಕರೇಗೌಡ ಶಿಕ್ಷಣ ಮಹಾವಿದ್ಯಾನಿಲಯದ ನಿವೃತ್ತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಡಿ.13ರಂದು ಮೂರನೇ ಗೋಷ್ಠಿ ನಡೆಯಲಿದ್ದು, ಗಾಂಧೀಜಿ ಅವರ ಶಿಕ್ಷಣ ವಿಚಾರಧಾರೆಗಳು ಕುರಿತಾಗಿ ಮೈಸೂರು ಸಿದ್ಧಾರ್ಥ ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ತ್ರಿವೇಣಿ ಹಾಗೂ ಗಾಂಧೀಜಿ ಬಹುರೂಪಿ ನೆಲೆಗಳು ಕುರಿತಾಗಿ ಮೈಸೂರು ಭಾರತ್ ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕ ಡಾ.ಅಮರ್‌ಕುಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮೈಸೂರು ಕುವೆಂಪು ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಬೆಟ್ಟೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಮಧ್ಯಾಹ್ನ 12.15 ರಿಂದ 1.20ರವರೆಗೆ ನಾ ಕಂಡಂತೆ ಬಾಪು ವಿಷಯದ ಬಗ್ಗೆ ಕೆ.ಆರ್.ನಗರದ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಪ್ರಭು ಬಿಸ್ಲೇಹಳ್ಳಿ ಸಂವಾದ ನಡೆಸಿಕೊಡಲಿದ್ದಾರೆ.
ಸಮಾರೋಪ ಸಮಾರಂಭ:
ಮಧ್ಯಾಹ್ನ 3 ಗಂಟೆಗೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹಿರಿಯ ಪತ್ರಕರ್ತ ರವೀಂದ್ರಭಟ್ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿ.ಪಂ. ಸಿಇಒ ಕೆ.ಆರ್.ನಂದಿನಿ, ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ.ಪ್ರಮೀಳಾ, ಸಂಸ್ಥೆಯ ಟ್ರಸ್ಟಿ ಕೀರ್ತನಾ ಆರ್. ನಿಖಿಲ್ ಹಾಗೂ ವಿನ್ಯಾಸಕ ಪ್ರಕಾಶ್ ಚಿಕ್ಕಪಾಳ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net