ತಹಸೀಲ್ದಾರ್‌ಗೆ 50 ಸಾವಿರ ರೂ. ದಂಡ

ಪ್ರತ್ಯೇಕ ಎರಡು ಪ್ರಕರಣಗಳ ಸಂಬಂಧ ಸರಿಯಾದ ಮಾಹಿತಿ ಒದಗಿಸದ ಮಳವಳ್ಳಿ ತಹಸೀಲ್ದಾರ್ ಎಸ್.ವಿ.ಲೋಕೇಶ್‌ಗೆ ತಲಾ 25 ಸಾವಿರ ರೂ.ನಂತೆ ಒಟ್ಟು 50 ಸಾವಿರ ರೂ. ದಂಡ ವಿಧಿಸಿ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಆದೇಶಿಸಿದ್ದಾರೆ.
ಪ್ರತ್ಯೇಕ ಎರಡು ಪ್ರಕರಣಗಳ ಸಂಬಂಧ ಸರಿಯಾದ ಮಾಹಿತಿ ಒದಗಿಸದ ಮಳವಳ್ಳಿ ತಹಸೀಲ್ದಾರ್ ಎಸ್.ವಿ.ಲೋಕೇಶ್‌ಗೆ ತಲಾ 25 ಸಾವಿರ ರೂ.ನಂತೆ ಒಟ್ಟು 50 ಸಾವಿರ ರೂ. ದಂಡ ವಿಧಿಸಿ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಆದೇಶಿಸಿದ್ದಾರೆ.
Published on
ಮಳವಳ್ಳಿ: ಪ್ರತ್ಯೇಕ ಎರಡು ಪ್ರಕರಣಗಳ ಸಂಬಂಧ ಸರಿಯಾದ ಮಾಹಿತಿ ಒದಗಿಸದ ಮಳವಳ್ಳಿ ತಹಸೀಲ್ದಾರ್ ಎಸ್.ವಿ.ಲೋಕೇಶ್‌ಗೆ ತಲಾ 25 ಸಾವಿರ ರೂ.ನಂತೆ ಒಟ್ಟು 50 ಸಾವಿರ ರೂ. ದಂಡ ವಿಧಿಸಿ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಆದೇಶಿಸಿದ್ದಾರೆ.
ನಿಗದಿತ ಅವಧಿಯೊಳಗೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸಿರುವ ಎಸ್.ವಿ.ಲೋಕೇಶ್ ಅವರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮ ಅನ್ವಯ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಆದೇಶಿಸಿ, ಕೈಗೊಂಡ ಕ್ರಮವನ್ನು ಪರಿಶೀಲಿಸುವ ಸಲುವಾಗಿ ಜು.8ರ ಬೆಳಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಏನಿದು ಪ್ರಕರಣ?: ತಾಲೂಕಿನ ಯತ್ತಂಬಾಡಿ ಗ್ರಾಮದ ಪ್ರವೀಣ್ ಅವರು ಕಾಳೇಶ್ವರಸ್ವಾಮಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ತಾಲೂಕು ಕಚೇರಿಗೆ ಸಲ್ಲಿಸಿದ ಎಲ್ಲ ದೂರುಗಳಿಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲು 2024ರ ಅಕ್ಟೋಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಯತ್ತಂಬಾಡಿ ಗ್ರಾಮದ ಕೆಂಪಸಿದ್ದೇಗೌಡ ಸಹ ಜಿಲ್ಲಾಧಿಕಾರಿ ಕಚೇರಿಯಲ್ಲಿ 2024ರ ಆಗಸ್ಟ್‌ನ ಪತ್ರ ಸಂಖ್ಯೆಯೊಂದಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ದೃಢೀಕರಿಸಿ ಕೊಡಲು ಅರ್ಜಿ ಸಲ್ಲಿಸಿದ್ದರು.
ತಾಲೂಕು ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿದ್ದ ತಹಸೀಲ್ದಾರ್ ಎರಡು ಪ್ರಕರಣಗಳಲ್ಲೂ ಅರ್ಜಿದಾರರಿಗೆ ನಿಗದಿತ ಅವಧಿಯಲ್ಲಿ ನೀಡದ ಹಿನ್ನೆಲೆಯಲ್ಲಿ ಅರ್ಜಿದಾರರು ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. 2025ರ ಜೂನ್‌ನಲ್ಲಿ ವಿಚಾರಣೆ ನಡೆಸಿದ ಆಯೋಗ ದಂಡ ವಿಧಿಸುವ ಎಚ್ಚರಿಕೆ ನೀಡಿ, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರೂ ತಹಸೀಲ್ದಾರ್ ಮಾಹಿತಿ ಒದಗಿಸದಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿತ್ತು.
2026ರ ಮೇ 4, ಮೇ 27 ಮತ್ತು ಜೂನ್ 16ರ ಆದೇಶಗಳಲ್ಲಿ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದ್ದರೂ ಪಾಲನೆ ಮಾಡದಿರುವುದು ಹಾಗೂ ದಂಡ ವಿಧಿಸುವುದಾಗಿ ಸ್ಪಷ್ಟ ನಿರ್ದೇಶನ ನೀಡಿದ್ದರೂ ಸಮಜಾಯಿಸಿ ನೀಡದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ, ಪ್ರತಿವಾದಿಯು ಮೇಲ್ಮನವಿದಾರರಿಗೆ ಉದ್ದೇಶಪೂರ್ವಕವಾಗಿ ಮಾಹಿತಿ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಎಸ್.ವಿ.ಲೋಕೇಶ್ ಅವರಿಗೆ ಎರಡೂ ಪ್ರಕರಣಗಳಲ್ಲೂ ತಲಾ 25 ಸಾವಿರ ರೂ.ದಂಡ ವಿಧಿಸಿದ್ದು, ಜತೆಗೆ ಈ ಮೊತ್ತವನ್ನು ಅವರ ವೇತನದಿಂದ ಕಡಿತಗೊಳಿಸುವಂತೆ ಸೂಚಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net