ಆರೋಗ್ಯ ಕುರಿತು ಎಚ್ಚರ ವಹಿಸಿ

ಪಟ್ಟಣದ ಶ್ರೀ ರಂಗನಾಯಕಿ ಸ್ತ್ರೀ ಸಮಾಜದ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಹಿಳೆಯರ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಜಾಗೃತಿ ಫಲಕ ಪ್ರದರ್ಶಿಸಿ ಅರಿವು ಮೂಡಿಸಿದರು. ಸ್ತ್ರೀರೋಗ ತಜ್ಞೆ ಡಾ.ಎಂ.ಸವಿತಾ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಇತರರು ಇದ್ದರು.
ಪಟ್ಟಣದ ಶ್ರೀ ರಂಗನಾಯಕಿ ಸ್ತ್ರೀ ಸಮಾಜದ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಹಿಳೆಯರ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಜಾಗೃತಿ ಫಲಕ ಪ್ರದರ್ಶಿಸಿ ಅರಿವು ಮೂಡಿಸಿದರು. ಸ್ತ್ರೀರೋಗ ತಜ್ಞೆ ಡಾ.ಎಂ.ಸವಿತಾ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಇತರರು ಇದ್ದರು.
Published on
ಶ್ರೀರಂಗಪಟ್ಟಣ: ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಜಾಗರೂಕರಾಗಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದರೆ ತಕ್ಷಣವೇ ವೈದ್ಯರಿಂದ ತಪಾಸಣೆ ಹಾಗೂ ಚಿಕಿತ್ಸೆ, ಸಲಹೆ ಪಡೆಯುವುದು ಅಗತ್ಯ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಂ.ಸವಿತಾ ಸಲಹೆ ನೀಡಿದರು.
ಪಟ್ಟಣದ ಶ್ರೀ ರಂಗನಾಯಕಿ ಸ್ತ್ರೀ ಸಮಾಜದ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಹಿಳೆಯರ ಆರೋಗ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಸ್ತನ ಕ್ಯಾನ್ಸರ್, ಗರ್ಭಕೋಶ, ಗರ್ಭ ಕಂಠದ ಕ್ಯಾನ್ಸರ್, ರಕ್ತದೊತ್ತಡ, ಹೃದಯಿ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತ ಹೀನತೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಈ ಕಾಯಿಲೆಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆ ಹಚ್ಚಲು ಆರೋಗ್ಯ ತಪಾಸಣೆ ಅತ್ಯಗತ್ಯ. ಆಧುನಿಕ ಜೀವನ ಶೈಲಿಯಿಂದಾಗಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಕಂಡು ಬರುತ್ತಿವೆ. ಹೀಗಾಗಿ ಮಹಿಳೆಯರು ಮುಂಜಾಗ್ರತೆ ವಹಿಸಿದರೆ ಮರಣಾಂತಿಕ ಕ್ಯಾನ್ಸರ್‌ನಂತಹ ಕಾಯಿಲೆಯಿಂದ ಪಾರಾಗಬಹುದಾಗಿದೆ. ಇವುಗಳನ್ನು ತಡೆಗಟ್ಟಲು ಆರೋಗ್ಯಕರ ಆಹಾರ ಸೇವನೆ, ಜಂಕ್‌ಫುಡ್ ತ್ಯಜಿಸುವುದು, ಸದಾ ದೈಹಿಕ ಚಟುವಟಿಕೆಯಿಂದ ಇರುವುದು, ದಿನ ನಿತ್ಯ ವ್ಯಾಯಾಮ, ಯೋಗ, ಧ್ಯಾನ ಮುಂತಾದ ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರು ಮಾತನಾಡಿ, ಎಚ್‌ಐವಿ, ಏಡ್ಸ್ ಕಾಯಿಲೆ ಕುರಿತು ಸಮಗ್ರ ಮಾಹಿತಿ ನೀಡಿದರು. ಡಿ.21ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ವರ್ಷದ ವರೆಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಲು ಸರ್ವರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷೆ ಕಮಲ, ಕಾಮಧೇನು ಶ್ರೀಶಕ್ತಿ ಸ್ವ-ಸಹಾಯ ಸಂಘದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ಉಪಾಧ್ಯಕ್ಷೆ ಲಯನ್ ಎನ್.ಸರಸ್ವತಿ, ಪ್ರಮುಖರಾದ ನಳಿನಿ, ಗಾಯತ್ರಿ ಹಾಗೂ ರಂಗನಾಯಕಿ ಸಮಾಜದ ಸರ್ವ ಸದಸ್ಯರು, ಮಹಿಳೆಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net