ಸಂವಿಧಾನದಲ್ಲಿದೆ ಸಮಾನತೆಯ ಸಂದೇಶ

ಶ್ರೀರಂಗಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಮಾತನಾಡಿದರು. ಚೇತನ ಯಾದವ್, ತಾಪಂ ಇಒ ಚಂದ್ರು, ಗಾಯತ್ರಿ, ಪರಮೇಶ್ ಇತರರು ಇದ್ದರು.
ಶ್ರೀರಂಗಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಮಾತನಾಡಿದರು. ಚೇತನ ಯಾದವ್, ತಾಪಂ ಇಒ ಚಂದ್ರು, ಗಾಯತ್ರಿ, ಪರಮೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಅಭಿಮತ
  • ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಶ್ರೀರಂಗಪಟ್ಟಣ: ನಾಗರಿಕರಿಗೆ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸುವುದೇ ಸಂವಿಧಾನದ ಉದ್ದೇಶ ಎಂದು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಡಾ.ಬಿ.ಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಪ್ರತಿಯೊಬ್ಬ ಭಾರತೀಯರಿಗೂ ಒಂದೇ ಸಮಾನವಾದ ಸಾಮಾಜಿಕ ಬದುಕಲು ಹಕ್ಕುಗಳಿವೆ. ಕಟ್ಟ ಕಡೆಯ ವ್ಯಕ್ತಿ ಕೂಡ ಸಮಾಜದಲ್ಲಿ ಬದುಕು ಕಂಡುಕೊಳ್ಳುವ ಅವಕಾಶವನ್ನು ಸಂವಿಧಾನ ನೀಡಿದೆ. ಎಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದು ಕರೆ ನೀಡಿದರು.
ಇದಕ್ಕೂ ಮೊದಲು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ತೆರಳಿ ಡಾ.ಬಾಬಾ ಸಾಹೇಬ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ವೇದಿಕೆ ಬಳಿ ಇರಿಸಿದ್ದ ಭಾವಚಿತ್ರಕ್ಕೂ ಪುಷ್ಪ ನಮನ ಸಲ್ಲಿಸಿದರು.
ತಹಸೀಲ್ದಾರ್ ಚೇತನ ಯಾದವ್, ತಾಪಂ ಇಒ ಚಂದ್ರು, ಸಮಾಜ ಕಾಲ್ಯಾಣಾಧಿಕಾರಿ ಗಾಯತ್ರಿ, ವಕೀಲ ಪರಮೇಶ್, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿ-ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net