ಜಿಲ್ಲೆಯಲ್ಲಿದ್ದಾರೆ ಅತೀ ಹೆಚ್ಚು ಕನ್ನಡ ಭಾಷಿಗರು

ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಶಾಸಕ ಕೆ.ಎಂ.ಉದಯ್ ಅಭಿನಂದಿಸಿದರು. ಪರಶುರಾಮ್ ಸತ್ತಿಗೇರಿ, ರಾಮಲಿಂಗಯ್ಯ, ನಾರಾಯಣಿ ಇದ್ದರು.
ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಶಾಸಕ ಕೆ.ಎಂ.ಉದಯ್ ಅಭಿನಂದಿಸಿದರು. ಪರಶುರಾಮ್ ಸತ್ತಿಗೇರಿ, ರಾಮಲಿಂಗಯ್ಯ, ನಾರಾಯಣಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮದ್ದೂರಿನಲ್ಲಿ ಕನ್ನಡ ರಾಜ್ಯೋತ್ಸವ
  • ವಿದ್ಯಾರ್ಥಿಗಳಿಂದ ಆಕರ್ಷಕ ಮೆರವಣಿಗೆ
  • ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ಶಾಸಕ ಕೆ. ಎಂ. ಉದಯ್ ಹರ್ಷ

ಮದ್ದೂರು: ಜಿಲ್ಲೆಯಲ್ಲಿ ಅತೀ ಹೆಚ್ಚು ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ ಇರುವುದು ಹೆಮ್ಮೆಯ ವಿಷಯ ಎಂದು ಶಾಸಕ ಕೆ.ಎಂ.ಉದಯ್ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಹಬ್ಬಗಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯ ಶನಿವಾರ ಹಮ್ಮಿಕೊಂಡಿದ್ದ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸುಮಾರು 2 ಸಾವಿರ ವರ್ಷಗಳ ಪ್ರಾಚೀನ ಇತಿಹಾಸವಿರುವ ಹಾಗೂ ಪ್ರಪಂಚದಲ್ಲಿ ಅತ್ಯಂತ ಸರಳ ಹಾಗೂ ಅರ್ಥಗರ್ಭಿತ ಭಾಷೆ ಎಂದರೆ ಅದು ಕನ್ನಡ ಭಾಷೆ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳು ನಗರದ ಶ್ರೀ ಉಗ್ರನರಸಿಂಹಸ್ವಾಮಿ ದೇಗುಲದ ಆವರಣದಿಂದ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿದೆ ಕನ್ನಡಾಂಬೆ ಭಾವಚಿತ್ರವನ್ನು ತೆರೆದ ವಾಹನದಲ್ಲಿಟ್ಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು.
ಅಭಿನಂದನೆ: ವಿವಿಧ ಕ್ಷೇತ್ರಗಳ ಸಾಧಕರಾದ ಎಸ್. ಕೆ. ನಾಗೇಶ್(ಸಾಹಿತ್ಯ), ರಾಮಲಿಂಗಯ್ಯ, ಕುಂಡಯ್ಯ(ಕೃಷಿ ), ಬಿ. ಎನ್. ಸುನೀಲ್ ಕುಮಾರ್(ರಂಗಭೂಮಿ), ಎಂ.ಎಸ್.ರಾಜಶೇಖರ(ಶಿಕ್ಷಣ), ಕೆ. ಸಿ. ರಾಘವೇಂದ್ರ ಕಬ್ಬಾರೆ(ಸಮಾಜ ಸೇವೆ), ಎಂ. ಸಿ. ರವಿಕುಮಾರ್(ಸಂಘಟನೆ) ಅವರನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಧ್ವಜಾರೋಹಣ ನೆರವೇರಿಸಿದರು. ಉಪ ಪ್ರಾಂಶುಪಾಲೆ ನಂದಿನಿ ಕನ್ನಡ ರಾಜ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ, ಆರಕ್ಷಕ ವೃತ್ತ ನಿರೀಕ್ಷಕ ನಾರಾಯಣಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net