ವೈರಮುಡಿಗೆ ನೀಡಿದ್ದ ಅನುದಾನ ಅಭಿವೃದ್ಧಿಗೆ ಬಳಕೆ

ಪಾಂಡವಪುರ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು.
ಪಾಂಡವಪುರ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು.
Published on
ಪಾಂಡವಪುರ: ವಿಶ್ವವಿಖ್ಯಾತ ವೈರಮುಡಿ ಬ್ರಹೋತ್ಸವಕ್ಕೆ ಸರ್ಕಾರ ಕಳೆದ ವರ್ಷ ನೀಡಿದ್ದ ಅನುದಾನದ ಉಳಿಕೆ ಮೊತ್ತವನ್ನು ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಕೆಆರ್‌ಐಡಿಎಎಲ್ ನಿರ್ವಹಿಸುತ್ತಿರುವ ಒಂದು ಕೋಟಿ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಸರ್ಕಾರ ಕಳೆದ ವರ್ಷದ ವೈರಮುಡಿ ಬ್ರಹೋತ್ಸವಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ ಬ್ರಹೋತ್ಸವಕ್ಕೆ 1.5 ಕೋಟಿ ರೂ. ವೆಚ್ಚ ಮಾಡಿ ಉಳಿಕೆ ಅನುದಾನವನ್ನು ಈ ಭಾಗದ ಜಕ್ಕನಹಳ್ಳಿ, ನಾರಾಯಣಪುರ, ಮಾಣಿಕ್ಯನಹಳ್ಳಿ ಮತ್ತು ಹಳೆಬೀಡು
ಗ್ರಾಪಂ ವ್ಯಾಪ್ತಿಗೆ ಸೇರಿದ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. ಸರ್ಕಾರ ಈ ವರ್ಷವೂ ವೈರಮುಡಿ ಬ್ರಹೋತ್ಸವಕ್ಕೆ ಅಗತ್ಯವಿದ್ದ ಅನುದಾನ ಬಿಡುಗಡೆ ಮಾಡಿದೆ ಎಂದು ವಿವರಿಸಿದರು. ಲಾಟರಿ, ಗಾಂಜಾ ಮಾರಾಟಕ್ಕೆ ಕಡಿವಾಣ: ತಾಲೂಕಿನಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್, ಗಾಂಜಾ, ಇಸ್ಪೀಟ್, ಪಚ್ಚಿ ದಂಧೆ ಹೆಚ್ಚಾಗಿದೆ ಎಂಬ
ಮಾಹಿತಿ ಹಿನ್ನೆಲೆಯಲ್ಲಿ ಈ ಎಲ್ಲ ದಂಧೆಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಹಲವು ಕಡೆ ದಾಳಿ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಸ್ಥಳೀಯರು ಈ ಅಕ್ರಮ ಚಟುವಟಿಕೆ
ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಇವುಗಳಿಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಕ್ಷೇತ್ರದಲ್ಲಿ ಇಂತಹ ಚಟುವಟಿಕೆ ನಡೆಯವಲು ಅವಕಾಶ ಕೊಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ವೇಳೆ ರೈತ ಸಂಘ ಮುಖಂಡರಾದ ಹೊಸಕೋಟೆ ಸುರೇಶ್, ಎಚ್.ಎನ್.ವಿಜಯಕುಮಾರ್, ಸಿಂಗ್ರೀಗೌಡ, ಹಳೆಬೀಡು ತಿಮ್ಮೇಗೌಡ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net