ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜ.30ರಂದು ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹದೇವ ತೀವ್ರವಾಗಿ ಗಾಯಗೊಂಡಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ನಂತರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರಿಗೆ ತಂದೆ, ತಾಯಿ, ಪತ್ನಿ, ಪುತ್ರಿ ಇದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.