ಗೆಜ್ಜಲಗೆರೆ ಪ್ರತಿಭಟನೆ ಹಿಂದೆ ಪ್ರತಿಪಕ್ಷದ ಕೈವಾಡ

 ಮದ್ದೂರು ತಾಲೂಕಿನ ನಗರಕೆರೆ ಬಳಿ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ನಗರಕೆರೆ ಸಂದೀಪ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಚಾವಿ, ಅಶೋಕ್, ಸುರೇಶ್ ಇತರರು ಇದ್ದರು.
ಮದ್ದೂರು ತಾಲೂಕಿನ ನಗರಕೆರೆ ಬಳಿ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ನಗರಕೆರೆ ಸಂದೀಪ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಚಾವಿ, ಅಶೋಕ್, ಸುರೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಆರೋಪ
  • ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಮದ್ದೂರು: ನಗರಸಭೆ ವಿರೋಧಿಸಿ ತಾಲೂಕಿನ ಗೆಜ್ಜಲಗೆರೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಪಕ್ಷದವರ ಕೈವಾಡವಿದೆ ಎಂದು ಶಾಸಕ ಕೆ.ಎಂ.ಉದಯ್ ಆರೋಪಿಸಿದರು.
ತಾಲೂಕಿನ ನಗರಕೆರೆ ಬಳಿ ಶನಿವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಮದ್ದೂರು ನಗರಸಭೆಗೆ ಗೆಜ್ಜಲಗೆರೆಯನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಗೆಜ್ಜಲಗೆರೆ ಗ್ರಾಪಂ ಆವರಣದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಬಲ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ. ಪ್ರತಿಪಕ್ಷದವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ನನ್ನ ಬೆಂಬಲವಿದೆ ಎಂದು ಹೇಳುತ್ತಿದ್ದಾರೆ. ಇದು ರಾಜಕೀಯ ಪ್ರೇರಿತ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದರು.
ಸ್ವಲ್ಪ ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರು, ನಾನು, ಜಿಲ್ಲಾಧಿಕಾರಿ ಪ್ರತಿಭಟನೆಯ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ್ದೇವೆ. ಅದರಂತೆ ಅವರು ಕಾಯಬೇಕು ಎಂದರು.
ಅದನ್ನು ಬಿಟ್ಟು ಶಾಂತಿಯುತ ಪ್ರತಿಭಟನೆಯನ್ನು ನಡೆಸದೆ ಗೇಟ್‌ನ ಬೀಗ ಒಡೆಯುವುದು, ರಸ್ತೆ ಸಂಚಾರ ತಡೆ ಮಾಡುವುದು, ರಾಜಕೀಯ ಮಾಡುವುದು ಸೇರಿದಂತೆ ಇತ್ಯಾದಿಗಳು ಗೂಂಡಾಗಿರಿ ಮಾಡಿದಂತೆ ಅಲ್ಲವೇ ಎಂದು ಪ್ರಶ್ನಿಸಿದರು.
ಗ್ರಾಪಂ ಮಾಜಿ ಅಧ್ಯಕ್ಷ ನಗರಕೆರೆ ಸಂದೀಪ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಮುಖಂಡರಾದ ಚಾವಿ, ಅಶೋಕ್, ಸುರೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net