ಗೌಡಗೆರೆ ಚಾಮುಂಡೇಶ್ವರಿ ದೇವಾಲಯದ ಧರ್ಮದರ್ಶಿ ಜಿ.ಎಲ್.ಮಲ್ಲೇಶ್ ಅಗಲಿದ ರೈತ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ರೈತ ಸಂಘಟನೆಯ ತಾಲೂಕು ಅಧ್ಯಕ್ಷ ಪ್ರಭುಲಿಂಗು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತ ಸಂಘಟನೆ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಮುಖಂಡರಾದ ಸಿ.ಪುಟ್ಟಸ್ವಾಮಿ, ಮನುಸೋಮಯ್ಯ, ವಿದ್ಯಾಸಾಗರ, ರಾಮಕೃಷ್ಣಯ್ಯ, ಅಣ್ಣೂರು ಮಹೇಂದ್ರ, ಕೀಳಘಟ್ಟ ನಂಜುಂಡಯ್ಯ, ಮನ್‌ಮುಲ್ ಮಾಜಿ ನಿರ್ದೇಶಕ ಕುಮಾರ್‌ಕೊಪ್ಪ ಇತರರಿದ್ದರು.