ಶಿಕ್ಷಕರು, ಉಪನ್ಯಾಸಕರ ವೃತ್ತಿ ಅತ್ಯಂತ ಶ್ರೇಷ್ಠ

 ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಪ್ರೊ.ಕೆ.ಬಿ.ನಾರಾಯಣರವರನ್ನು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅಭಿನಂದಿಸಿದರು. ಪ್ರೊ.ರವಿ, ಡಾ.ಸಿದ್ದರಾಜು, ಪ್ರೊ.ಗಂಗಾಧರಯ್ಯ, ಪ್ರೊ.ಮಾದೇಗೌಡ ಸೇರಿದಂತೆ ಇತರರು ಇದ್ದರು.
ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಪ್ರೊ.ಕೆ.ಬಿ.ನಾರಾಯಣರವರನ್ನು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅಭಿನಂದಿಸಿದರು. ಪ್ರೊ.ರವಿ, ಡಾ.ಸಿದ್ದರಾಜು, ಪ್ರೊ.ಗಂಗಾಧರಯ್ಯ, ಪ್ರೊ.ಮಾದೇಗೌಡ ಸೇರಿದಂತೆ ಇತರರು ಇದ್ದರು.
Published on
ಮದ್ದೂರು: ಶಿಕ್ಷಕರ ಹಾಗೂ ಉಪನ್ಯಾಸಕರ ವೃತ್ತಿ ಅತ್ಯಂತ ಶ್ರೇಷ್ಠವಾಗಿದ್ದು, ಇವರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಪ್ರೊ.ಕೆ.ಬಿ.ನಾರಾಯಣ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಗುರುವಾರ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಕರನ್ನು ಹಾಗೂ ಉಪನ್ಯಾಸಕರನ್ನು ಸದಾ ಪೂಜ್ಯ ಭಾವನೆಯಿಂದ ನೋಡುತ್ತಾರೆ. ಇದರಿಂದ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ. ಇವರಿಂದ ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡಲು ಸಾಧ್ಯ ಎಂದರು.
ಪ್ರಾಂಶುಪಾಲರಾಗಿ ಪ್ರೊ.ಕೆ.ಬಿ.ನಾರಾಯಣ್ ಉತ್ತಮವಾಗಿ ಕೆಲಸ ಮಾಡುವ ಮೂಲಕ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಇಂತಹ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾಗಿದ್ದು, ಇವರ ವೃತ್ತಿ ಜೀವನದಲ್ಲಿ ವಿದ್ಯಾರ್ಥಿಗಳ ನೆಚ್ಚಿನ ಪ್ರಾಂಶುಪಾಲರಾಗಿದ್ದರು, ಮುಂದಿನ ನಿಮ್ಮ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ್‌ರವರು, ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಇಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕೆಲಸ ನಿರ್ವಹಿಸಿದ್ದೇನೆ ಆ ಬಗ್ಗೆ ನನಗೆ ತೃಪ್ತಿ ಇದೆ ಎಂದು ಅಭಿಪ್ರಾಯಪಟ್ಟರು.
ಟೀಮ್ ನಾಲ್ವಡಿ ಸೇರಿದಂತೆ ಉಪನ್ಯಾಸಕರು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಕೆ.ಬಿ.ನಾರಾಯಣ್ ಅವರನ್ನು ಅಭಿನಂದಿಸಿ ಗೌರವಿಸಿದರು ಹಾಗೂ ಕೆ.ಬಿ.ನಾರಾಯಣ್ ಅವರ ಬಗ್ಗೆ ಉಪನ್ಯಾಸಕರು ಮೆಚ್ಚುಗೆ ಮಾತುಗಳನ್ನಾಡಿದರು.
ಪ್ರಭಾರ ಪ್ರಾಂಶುಪಾಲ ಪ್ರೊ.ರವಿ, ಡಾ.ಸಿದ್ದರಾಜು, ಪ್ರೊ.ಗಂಗಾಧರಯ್ಯ, ಪ್ರೊ.ಮಾದೇಗೌಡ, ಡಾ.ಸಿ.ಸುರೇಶ್, ಪ್ರೊ.ಲತಾಕುಮಾರಿ, ಪ್ರ.ಮಹೇಶ್‌ಕುಮಾರ್, ಡಾ.ಪ್ರಭಾಮಣಿ, ಡಾ.ಅಂತೋಣಿಮರಿ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net