ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿನುತಾ ಕೆ.ಎಂ.ಉದಯ್, ತಿಮ್ಮೇಗೌಡ, ಶಾಂತಮ್ಮ, ರಾಮಲಿಂಗಯ್ಯ, ಹರೀಶ್, ಮನೋಹರ್, ಹರೀಶ್ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ವಿನುತಾ ಕೆ.ಎಂ.ಉದಯ್ ಹೇಳಿಕೆ
ಮಹಿಳಾ ಗ್ರಾಮಸಭೆ, ಸೀಮಂತ ಕಾರ್ಯಕ್ರಮ
ಮದ್ದೂರು: ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೆ.ಎಂ.ಉದಯ್ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ವಿನುತಾ ಕೆ.ಎಂ.ಉದಯ್ ಹೇಳಿದರು.
ತಾಲೂಕಿನ ಕದಲೂರು ಗ್ರಾಮದಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಮಹಿಳಾ ಗ್ರಾಮಸಭೆ ಹಾಗೂ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಹಳಷ್ಟು ಕುಟುಂಬಗಳ ಆರ್ಥಿಕ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಪ್ರಮುಖ. ಹೆಣ್ಣು ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದುಕೊಂಡು ಒಳ್ಳೆಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮಹಿಳೆ ಬಾಹ್ಯಾಕಾಶ, ಕ್ರೀಡೆ, ತಾಂತ್ರಿಕ ಕ್ಷೇತ್ರ, ರಾಜಕೀಯ ಸೇರಿದಂತೆ ಎಲ್ಲ ರಂಗದಲ್ಲಿಯೂ ಉತ್ತಮ ಸಾಧನೆಯನ್ನು ಮಾಡುತ್ತಿದ್ದು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುಂದೆ ಬರಬೇಕು ಎಂದು ಸಲಹೆ ನೀಡಿದರು.
ಪಾಲಕರು ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು, ಬಾಲ್ಯ ವಿವಾಹವನ್ನು ಮಾಡಬಾರದು. ಅದರಿಂದ ಶಿಕ್ಷಣ ಸೇರಿದಂತೆ ಹಲವಾರು ಹೆಣ್ಣಿನ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದರು.
ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆ, ಗೃಹಲಕ್ಷ್ಮಿ ಸೇರಿದಂತೆ ಹಲವು ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತಂದಿರುವುದು ಮಹಿಳೆಯರಿಗೆ ಅನುಕೂಲವಾಗಿದೆ. ಕುಟುಂಬ ನಿರ್ವಹಣೆಗೂ ಪ್ರಯೋಜನವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ ಅದ್ವೀತಿಯ ಸಾಧನೆ ಮಾಡಿ ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಪ್ರಶಂಸನೀಯ ಸಂಗತಿಯಾಗಿದೆ ಎಂದರು.
ಶಾಸಕ ಕೆ.ಎಂ.ಉದಯ್ ಅವರು ಸ್ವ ಗ್ರಾಮವಾದ ಕದಲೂರು ಗ್ರಾಮಕ್ಕೆ ಸರ್ಕಾರದಿಂದ ವಿಶೇಷ ಅನುದಾನ ತಂದು ಸಮಗ್ರ ಅಭಿವೃದ್ಧಿ ಮಾಡುತ್ತಿದ್ದು, ರಾಜ್ಯಕ್ಕೆ ಕದಲೂರು ಗ್ರಾಮದ ಮಾದರಿ ಗ್ರಾಮವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ, ಉಪಾಧ್ಯಕ್ಷೆ ಶಾಂತಮ್ಮ, ಸದಸ್ಯರಾದ ಲೋಕೇಶ್, ಪಾಪಣ್ಣ, ರತ್ನಮ್ಮ, ಬೋರಮ್ಮ, ಶಿವಣ್ಣ, ಸರೋಜಮ್ಮ, ತಿಮ್ಮೇಗೌಡ, ತಾ.ಪಂ. ಇ.ಓ.ರಾಮಲಿಂಗಯ್ಯ, ಮನ್ ಮುಲ್ ನಿರ್ದೇಶಕ ಹರೀಶ್, ವೈದ್ಯ ಮನೋಹರ್, ಪಿ ಡಿ ಓ ಜಗದೀಶ್ ಇದ್ದರು.