ಜೀವ ಉಳಿಸಲು ಪ್ರಯತ್ನಿಸುವುದೇ ವೈದ್ಯನ ನಿಜವಾದ ಕರ್ತವ್ಯ

ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶ್ರೀಮತಿ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ  ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ  ಪ್ರಶಸ್ತಿಯನ್ನು ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಸ್ವೀಕರಿಸಿದರು. ಪದ್ಮಾ ಜಿ.ಮಾದೇಗೌಡ, ಮಧು ಜಿ.ಮಾದೇಗೌಡ, ಬಿ.ಎಂ.ನಂಜೇಗೌಡ, ಆಶಯ್ ಮಧು, ಬಸವೇಗೌಡ ಇತರರಿದ್ದರು.
ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶ್ರೀಮತಿ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿಯನ್ನು ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಸ್ವೀಕರಿಸಿದರು. ಪದ್ಮಾ ಜಿ.ಮಾದೇಗೌಡ, ಮಧು ಜಿ.ಮಾದೇಗೌಡ, ಬಿ.ಎಂ.ನಂಜೇಗೌಡ, ಆಶಯ್ ಮಧು, ಬಸವೇಗೌಡ ಇತರರಿದ್ದರು.
Published on
ಕೆ.ಎಂ.ದೊಡ್ಡಿ: ರೋಗಿಯ ಕ್ಲಿಷ್ಟಕರ ಸನ್ನಿವೇಶದಲ್ಲೂ ಕೊನೆಯ ಕ್ಷಣದವರೆಗೂ ಜೀವ ಉಳಿಸುವ ಪ್ರಯತ್ನ ಮಾಡುವುದೇ ವೈದ್ಯನ ನಿಜವಾದ ಕರ್ತವ್ಯ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ ಅಭಿಪ್ರಾಯಪಟ್ಟರು.
ಇಲ್ಲಿನ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶ್ರೀಮತಿ ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ 12ನೇ ವರ್ಷದ ಶ್ರೀಮತಿ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ನಾನು ಬಡತನದಲ್ಲಿ ಹುಟ್ಟಿ ವೈದ್ಯೆಯಾಗಿ ಜನ ಸೇವೆ ಮಾಡುತ್ತಿದ್ದೇನೆ. ನಾನು ಸಹ ಸಾವನ್ನು ಗೆದ್ದು ಬಂದಿದ್ದೇನೆ. ವೈದ್ಯ ವೃತ್ತಿ ಬಹಳ ಪವಿತ್ರ ವೃತ್ತಿಯಾಗಿದ್ದು ಅದಕ್ಕೆ ನ್ಯಾಯ ಸಿಗಬೇಕಾದರೆ ರೋಗಿಯ ಜೀವ ಉಳಿಸಲು ಕೊನೆ ಕ್ಷಣದವರೆಗೆ ಪ್ರಯತ್ನ ಮಾಡಬೇಕು ಎಂದರು.
ಮಾಜಿ ಸಂಸದ ದಿ.ಜಿ.ಮಾದೇಗೌಡ ಅವರ ಕಾವೇರಿ ಚಳವಳಿಯ ಹೋರಾಟಗಳನ್ನು ನಾನು ದೈಶ್ಯ ಮಾಧ್ಯಮಗಳಲ್ಲಿ ನೋಡಿ ಅವರ ಹೋರಾಟದ ಪರಿ, ರೈತ ಪರ ಕಾಳಜಿ ಇಂದಿನ ಯುವಕರಿಗೆ ಆದರ್ಶವಾಗಿದ್ದು ಅಂತಹ ವ್ಯಕ್ತಿ ಸೂರ್ಯ-ಚಂದ್ರ ಇರುವವರೆಗೂ ಶಾಶ್ವತ ಎಂದು ಶ್ಲಾಸಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಂಘದ ಅಧ್ಯಕ್ಷ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಮಾತನಾಡಿ, ಮಾಜಿ ಸಂಸದ ದಿ.ಜಿ.ಮಾದೇಗೌಡ ಅವರು ಸಚಿವರ ಮುಂದೆ ಜನಪರ ಕೆಲಸಕ್ಕಾಗಿ ಜಿಲ್ಲಾಧಿಕಾರಿಗೆ ಧಮಕಿ ಹಾಕಿ ಅರಗಿಸಿಕೊಂಡ ಕೆಚ್ಚೆದೆಯ ಹೋರಾಟಗಾರ. ಅಂತಹ ವ್ಯಕ್ತಿ ಮತ್ತೊಬ್ಬ ಇಲ್ಲ ಎಂದರು.
ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತ ಗೌಡರು ಹಾಕಿಕೊಟ್ಟ ಮಾರ್ಗದಲ್ಲಿ ಪುತ್ರ ಮಧು ಜಿ.ಮಾದೇಗೌಡ ಅವರು ನಡೆಯುತ್ತಿದ್ದಾರೆ. ಅವರ ಪುತ್ರ ಆಶಯ್ ಮಧು ಹೊಸ ಆಲೋಚನೆಗಳನ್ನು ಇಟ್ಟುಕೊಂಡು ಸಂಸ್ಥೆಯನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಎಂದರು.
ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಶಿಕ್ಷಕರು, ಉಪಾನ್ಯಾಸಕಿಯರು ಮತ್ತು ಸಿಬ್ಬಂದಿಗೆ ನಡೆಸಲಾದ ಹಲವು ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಭಾರತೀ ವಿದ್ಯಾಸಂಸ್ಥೆಯ ಮುಖ್ಯಸ್ಥರೂ ಆದ ಎಂಎಲ್ಸಿ ಮಧು ಜಿ.ಮಾದೇಗೌಡ ಉದ್ಘಾಟಿಸಿದರು. ದಿ.ಜಿ.ಮಾದೇಗೌಡ ಅವರ ಪತ್ನಿ ಪದ್ಮಾ ಜಿ.ಮಾದೇಗೌಡ, ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ, ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು, ಕಾರ್ಯದರ್ಶಿ ಸಿದ್ದೇಗೌಡ, ಟ್ರಸ್ಟಿಗಳಾದ ಕಾರ್ಕಹಳ್ಳಿ ಬಸವೇಗೌಡ, ಎಸ್.ಜಯರಾಮು, ಮುದ್ದಯ್ಯ, ಮಿಮ್ಸ್ ಮಾಜಿ ನಿರ್ದೇಶಕ ಡಾ.ಜಿ.ಎಂ.ಪ್ರಕಾಶ್, ಕಾರ್ಯಕ್ರಮದ ಸಂಯೋಜಕಿ ಮಮತಾ ನಾಗ್, ಪ್ರತಿಮಾ, ಕುಮುದಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net