ಭೂಮಿತಾಯಿ ಹೋರಾಟ ಸಮಿತಿಯಿಂದ ಪಂಜಿನ ಮೆರವಣಿಗೆ

ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಮಂಗಳವಾರ ಸಂಜೆ ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಕೆಆರ್‌ಎಸ್‌ನಿಂ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕೆ.ಎಸ್.ನಂಜುಂಡೇಗೌಡ, ಬಿ.ಸಿ.ಕೃಷ್ಣೇಗೌಡ, ಮಹದೇವು ಇತರರು ಇದ್ದರು.
ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಮಂಗಳವಾರ ಸಂಜೆ ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಕೆಆರ್‌ಎಸ್‌ನಿಂ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕೆ.ಎಸ್.ನಂಜುಂಡೇಗೌಡ, ಬಿ.ಸಿ.ಕೃಷ್ಣೇಗೌಡ, ಮಹದೇವು ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Bhumitayi Horata Samiti
ಶ್ರೀರಂಗಪಟ್ಟಣ: ಕನ್ನಂಬಾಡಿ ಅಣೆಕಟ್ಟೆಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (ಸಿಡಬ್ಲ್ಯುಸಿ ) ನೀಡಿರುವ ಆದೇಶದ ವಿರುದ್ಧ ಭೂಮಿತಾಯಿ ಹೋರಾಟ ಸಮಿತಿಯ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಪಟ್ಟಣದ ಬೆಂಗಳೂರು-ಮೈಸೂರು ಹಳೆಯ ರಾಷ್ಟ್ರೀಯ ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಮಂಗಳವಾರ ಸಂಜೆ ಜಮಾವಣೆಗೊಂಡ ಸಮಿತಿಯ ಕಾರ್ಯಕರ್ತರು ನೀರಾವರಿ ನಿರ್ವಹಣಾ ಸಮಿತಿಯ ಆದೇಶದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ರೈತನಾಯಕ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ರಾಜ್ಯದಲ್ಲಿ ಈ ಭಾರಿ ಹವಾಮಾನ ವೈಪರೀತ್ಯ ಕಾರಣ ಮಳೆ ಕೊರತೆಯಾಗಿ ಕೆಆರ್‌ಎಸ್ ಜಲಾಶಯ ಭರ್ತಿಯಾಗದಿರುವುದು ಆತಂಕ ಮೂಡಿಸಿದೆ. ಸಕಾಲದಲ್ಲಿ ನೀರು ಸಿಗದೆ ರೈತರ ಬೆಳೆ ನಾಶವಾಗಿದ್ದು, ಸಾಲದ ಸುಳಿಗೆ ಸಿಲುಕಿದ್ದಾರೆ.
ಈಗ ಜಲಾಶಯದಲ್ಲಿ ಇರುವ ನೀರಿನ ಪ್ರಮಾಣ ಪರಿಶೀಲನೆಯೇ ನಡೆಸದೇ ಸಿಡಬ್ಲೂಸಿ ನೀಡಿರುವ ಆದೇಶ ಏಕಪಕ್ಷೀಯವಾಗಿದೆ. ರಾಜ್ಯ ಸರ್ಕಾರ ತಜ್ಞರಿಂದ ಜಲಾನಯ ಪ್ರದೇಶದ ಪರಿಸ್ಥಿತಿಯ ಬಗ್ಗೆ ವರದಿ ಸಿದ್ಧಪಡಿಸಿ ಸಮಿತಿಗೆ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಸುವಲ್ಲಿ ಸರ್ಕಾರ ಎಡವಿರುವುದರಿಂದ ಈ ರೀತಿಯ ಆದೇಶ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಷ್ಟುದಿನ ಕುಡಿಯುವ ನೀರಿನ ನೆಪ ಹೇಳಿ ನಾಲೆಗಳಿಗೆ ನೀರು ಬಿಡಲಿಲ್ಲ. ಈಗೇನಾದರೂ 15ದಿನ ನಿತ್ಯ 3,500 ಕ್ಯೂಸೆಕ್ ನೀರು ಬಿಡಲು ಮುಂದಾದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಭೂಮಿ ತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ, ಖಜಾಂಚಿ ಮಹದೇವು, ಪದಾಧಿಕಾರಿಗಳಾದ ದರಸಗುಪ್ಪೆ ಮಹದೇವು, ಸುರೇಶ್, ಅಚ್ಚಪ್ಪನಕೊಪ್ಪಲು ರವಿ ಲಕ್ಷ್ಮಣ, ಕೃಷ್ಣ, ನಾಗಪ್ಪ, ಡಿ.ಮಂಜುನಾಥ್, ಮಹಲಿಂಗು, ಪೈ.ನಾಗಣ್ಣ, ಕಪರನಕೊಪ್ಪಲು ಮಹೇಶ್, ಕೆಂಪೇಗೌಡ, ಕೆ.ಪಿ.ಸ್ವಾಮಿಗೌಡ,ರಾಮಚಂದ್ರು, ಪ್ರಕಾಶ್ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net