ಕೆಆರ್‌ಎಸ್ ಹಿನ್ನೀರಿಗೆ ಪ್ರವಾಸಿಗರು ಲಗ್ಗೆ

ಕೆ.ಆರ್.ಸಾಗರ ಅಣೆಕಟ್ಟೆಯ ಹಿನ್ನೀರಿನಲ್ಲಿ ಕಾಣುತ್ತಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯ.
ಕೆ.ಆರ್.ಸಾಗರ ಅಣೆಕಟ್ಟೆಯ ಹಿನ್ನೀರಿನಲ್ಲಿ ಕಾಣುತ್ತಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯ.
Published on
ಕೆ.ಆರ್.ಸಾಗರ: ಅಣೆಕಟ್ಟೆಯಲ್ಲಿ ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಹಿನ್ನೀರಿನಲ್ಲಿ ಶ್ರೀಲಕ್ಷ್ಮೀ ನಾರಾಯಣ ದೇವಾಲಯದ ಕಾಣುತ್ತಿದ್ದು, ಈ ಕುರಿತು ನಂಬರ್ 1 ದಿನಪತ್ರಿಕೆ ವಿಜಯವಾಣಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದೀಗ ಹಿನ್ನೀರಿನ ಪ್ರದೇಶಕ್ಕೆ ಪ್ರತಿದಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜತೆಗೆ ಶ್ರೀಲಕ್ಷ್ಮೀ ನಾರಾಯಣ ದೇವಾಲಯ ಫೋಟೋ ಶೂಟ್ ತಾಣವಾಗಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಪ್ರವಾಸಿತಾಣವಾಗಿರುವ ಕೆ.ಆರ್.ಸಾಗರ ಅಣೆಕಟ್ಟೆಯ ಹಿನ್ನೀರು ಪ್ರದೇಶದಲ್ಲಿ ಇದೀಗ ಪರಿಸರ ಮಾಲಿನ್ಯವಾಗುವ ಆತಂಕ ಎದುರಾಗಿದ್ದು, ಪ್ರವಾಸಿಗರು ತಮ್ಮೊಂದಿಗೆ ತರುವ ಪ್ಲಾಸ್ಟಿಕ್ ಸೇರಿದಂತೆ ಇತರ ವಸ್ತುಗಳನ್ನು ಎಲ್ಲಂದರಲ್ಲಿ ಬಿಸಾಡುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net