ಸಿಬಿಎಸ್‌ಇನಲ್ಲಿ ಪರಿವರ್ತನಾ ಶಿಕ್ಷಣ ಸಂಸ್ಥೆ ಸಾಧನೆ

ಪರಿವರ್ತನಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು
ಪರಿವರ್ತನಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು
Published on
ಶ್ರೀರಂಗಪಟ್ಟಣ : ಪಟ್ಟಣದ ಪ್ರತಿಷ್ಠಿತ ಪರಿವರ್ತನಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯು 2025-26ನೇ ಸಾಲಿನ 10ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಗಳಿಸಿ ಸಾಧನೆಗೈದಿದೆ.
ಶಾಲೆಯಲ್ಲಿ ಒಟ್ಟು 93 ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆ ಎದುರಿಸಿದ್ದು, 4 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ವೈ.ಮೋನಿಷಾ-ಶೇ.91, ಸಮೃದ್‌ಎನ್. ಗೌಡ-ಶೇ.90.6, ಎಸ್.ಪಿ. ಪ್ರೀತಿ-ಶೇ.90.6 , ಡಿ.ಆರ್.ವೇದಪ್ರಕಾಶ್-ಶೇ.90.4 ಪಡೆದಿದ್ದಾರೆ. ಉಳಿದಂತೆ 29 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, 40 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 24 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿ ಶಾಲೆಗೆ ಉತ್ತಮ ಫಲಿತಾಂಶ ತರುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣೀಕೃತರಾದ ಶಾಲೆಯ ಪ್ರಾಂಶುಪಾಲ, ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಸಂಸ್ಥೆಯ ಮುಖ್ಯಸ್ಥರಾದ ಮಂಜುರಾಮ್, ಸಂಕ್ರಾಂತಿ ಮಂಜುರಾಮ್ ಹಾಗೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಪುಟ್ಟೇಗೌಡ ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net