ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ನೀರಾವರಿ ಮಂತ್ರಿಯಾಗಿ ರಾಜ್ಯದ ಎಲ್ಲ ಭಾಗಗಳಲ್ಲಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಜಿಲ್ಲೆಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ತೂಬಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ಎಲೆಚಾಕನಹಳ್ಳಿ, ಯಲಿಯೂರು, ಉರಮಾರ ಕಸಲಗೆರೆ, ರಾಗಿಮುದ್ದನಹಳ್ಳಿ, ಜಕ್ಕನಹಳ್ಳಿ, ಆಲುಗೂಡು ಕೆರೆಕಟ್ಟೆಗಳಿಗೆ ಲೋಕಪಾವನಿ ನದಿಯಿಂದ ನೀರು ತುಂಬಿಸಲು ಅನುವು ಮಾಡಿ ರೈತರಿಗೆ ನೆರವು ನೀಡಿದ್ದಾರೆ ಎಂದು ತಿಳಿಸಿದರು.