ಸಂಗೀತ ಲೋಕಕ್ಕೆ ಎನ್.ಜಾನಕಿ ಅಪೂರ್ವ ಕೊಡುಗೆ: ಲೇಖಕಿಯರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಅನುಸೂಯ ಹೊಂಬಾಳೆ ಹೇಳಿಕೆ

ಮಂಡ್ಯ ನಗರದ ಎಸ್.ಬಿ ಸಮುದಾಯ ಭವನದಲ್ಲಿ ಎನ್.ಜಾನಕಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಮಂಡ್ಯ ನಗರದ ಎಸ್.ಬಿ ಸಮುದಾಯ ಭವನದಲ್ಲಿ ಎನ್.ಜಾನಕಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಗಾನಕೋಗಿಲೆ ಎಸ್.ಜಾನಕಿ ಅವರ ಶ್ರದ್ಧಾಂಜಲಿ ಸಭೆ
  • ಲೇಖಕಿಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜನೆ
ಮಂಡ್ಯ: ಎಸ್.ಜಾನಕಿ ಅವರು ಸಂಗೀತ ಲೋಕಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ ಎಂದು ಲೇಖಕಿಯರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಅನುಸೂಯ ಹೊಂಬಾಳೆ ತಿಳಿಸಿದರು.
ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಲೇಖಕಿಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಿದ್ದ ಗಾನಕೋಗಿಲೆ ಎಸ್.ಜಾನಕಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಎಸ್.ಜಾನಕಿ ಅವರು ಎಲ್ಲರಿಂದಲೂ ಅಮ್ಮ ಎಂದು ಕರೆಸಿಕೊಂಡಿದ್ದು, ನಿಜವಾಗಲೂ ಆ ಪದಕ್ಕೆ ವಿಶೇಷ ಶಕ್ತಿ ತುಂಬಿದವರು. ಎಲ್ಲರನ್ನೂ ಪ್ರೀತಿಯಿಂದ ಅಪ್ಪಿಕೊಳ್ಳುತ್ತಿದ್ದರು. ಆಂಧ್ರದ ಹಳ್ಳಿಯಲ್ಲಿ ಜನಿಸಿದ ಅವರು ಸಂಗೀತವನ್ನು ಕಲಿತು ಎಷ್ಟೆಲ್ಲಾ ಸಾಧನೆ ಮಾಡಿದ್ದಾರೆ ಎಂದು ಪ್ರಶಂಸಿಸಿದರು.
ಭಾರತೀಯ ಚಿತ್ರರಂಗದ ಹೆಮ್ಮೆಯ ಗಾಯಕಿ ಎಸ್.ಜಾನಕಿ ಅವರು 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರ ಹಾಡು ಹಾಡುವ ಮೂಲಕ ಬಹುಭಾಷಾ ಗಾಯಕಿಯಾಗಿ ದಾಖಲೆ ಬರೆದಿದ್ದಾರೆ. ಎಸ್.ಜಾನಕಿ ಅವರಿಗೆ ಮೂರು ರಾಷಟ್ರೆ ಪ್ರಶಸ್ತಿ, ಹಲವಾರು ರಾಜ್ಯ ಪ್ರಶಸ್ತಿ ಲಭಿಸಿವೆ. ಅಭಿಮಾನಿಗಳ ಪ್ರತಿಯೊಬ್ಬರ ಮನಸ್ಸಿನಲ್ಲಿ ನೆಲೆಸಿರುವ ಪ್ರಶಸ್ತಿಗಿಂತ ಮತ್ತೊಂದು ಪ್ರಶಸ್ತಿ ಇಲ್ಲ. ದಕ್ಷಿಣ ಕ್ಷೇತ್ರದ ಸಂಗೀತ ಕ್ಷೇತ್ರವನ್ನು ಬಹಳ ತಡವಾಗಿ ಗುರುತಿಸುತ್ತಿದ್ದೀರಿ ಎಂದು ಪದ್ಮಭೂಷಣ ಪ್ರಶಸ್ತಿಯನ್ನೇ ನಿರಾಕರಿಸಿದವರು ಎಸ್.ಜಾನಕಿ ಅವರು ಎಂದು ಹೇಳಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಮಾತನಾಡಿದರು. ಲೇಖಕಿಯರ ಸಂಘದ ರಾಜ್ಯಾಧ್ಯಕ್ಷೆ ಆರ್.ಸುನಂದಮ್ಮ, ಜಿಲ್ಲಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಸುನಂದಾ ಜಯರಾಂ, ಡಾ.ಎಂ.ಕೆಂಪಮ್ಮ, ಮಂಜುಳಾ ಉದಯಶಂಕರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net