ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಾಯ

CRIME
CRIME
Published on
ಹಲಗೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ.
ಸಮೀಪದ ಬಾಣಸಮುದ್ರ ಗ್ರಾಮದ ಹರೀಶ್ ಗಾಯಗೊಂಡವ. ಹಿಂಬದಿ ಸವಾರನ ಮಾಹಿತಿ ತಿಳಿದು ಬಂದಿಲ್ಲ. ಇಬ್ಬರು ಬಾಣಸಮುದ್ರ ಬಳಿಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು ಭಾನುವಾರ ಸಂಜೆ ಹಲಗೂರಿಗೆ ಬಂದು ಮನೆಗೆ ಬೇಕಾದ ದಿನಸಿ ಪದಾರ್ಥಗಳನ್ನು ಖರೀದಿಸಿ ವಾಪಸ್ ಗಾರ್ಮೆಂಟ್ಸ್‌ಗೆ ತೆರಳುತ್ತಿದ್ದರು. ಈ ವೇಳೆ ಮಳವಳ್ಳಿ ಕಡೆಯಿಂದ ಬಂದ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಅವಘಾತ ಸಂಭವಿಸಿ ಹರೀಶ್ ಕಾಲಿಗೆ ಗಂಭೀರ ಗಾಯವಾಗಿದೆ. ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇಬ್ಬರು ಗಾಯಾಳುಗಳಿಗೆ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸೆ ಕೊಡಿಸಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net