ಈ ಮೂವರು ತಮಟೆ ಕಲಾವಿದರಾಗಿದ್ದು, ಕಾರ್ಯಕ್ರಮ ಮುಗಿಸಿಕೊಂಡು ಕೆ.ಎಂ.ದೊಡ್ಡಿ ಕಡೆಯಿಂದ ಒಂದೇ ಬೈಕ್‌ನಲ್ಲಿ ಬರುತ್ತಿದ್ದಾಗ ಮಳವಳ್ಳಿ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಮೂವರಿಗೂ ತಲೆಗೆ ತೀವ್ರ ಪೆಟ್ಟು ಬಿದ್ದು ಗಂಭೀರ ಸ್ಥಿತಿಯಲ್ಲಿದ್ದರು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆಂಬುಲೆನ್ಸ್ ಮೂಲಕ ಎಲ್ಲರನ್ನೂ ಪಟ್ಟಣದ ತಾಲೂಕು ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆ ರವಾನಿಸಿದರು.