ಬನ್ನೂರಿನಿಂದ ಕಿರುಗಾವಲು ಸಮೀಪದ ಅಕ್ಕಿ ಗಿರಣಿಯೊಂದರಲ್ಲಿ ಅಕ್ಕಿ ಮೂಟೆಗಳನ್ನು ತುಂಬಿಸಿಕೊಂಡು ಹೋಗಲು ಖಾಲಿ ಲಾರಿಯಲ್ಲಿ ಬರುತ್ತಿದ್ದಾದ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಮಗುಚಿಕೊಂಡಿದ್ದು, ಈ ವೇಳೆ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾದರೆ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು, ಅಷ್ಟರಲ್ಲಾಗಲೇ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.