ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಮಾರಮ್ಮ ದೇವಿ ನೂತನ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಏನು ಮಾಡಬೇಕೆಂಬುದು ಖಂಡಿತ ನನಗೆ ಗೊತ್ತಿದೆ. ಈ ಬಗ್ಗೆ ನಾನೇ ಸಿಎಂಗೆ ಪತ್ರ ಬರೆದಿದ್ದೇನೆ. ಮಂಡ್ಯದಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಆಟೋಮ್ಯಾಟಿವ್ ರಿಸರ್ಚ್ ಅಸೋಸಿಯೆಷನ್ ಆಫ್ ಇಂಡಿಯಾ ಸಂಸ್ಥೆ ಸ್ಥಾಪಿಸಲು ಜಾಗ ಕೊಡುವಂತೆ ನನ್ನ ಇಲಾಖೆಯಿಂದಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಆದ್ದರಿಂದ ಈ ಬಗ್ಗೆ ಬೇರೆ ಯಾರ ಸರ್ಟಿಫಿಕೇಟ್ ಬೇಕಿಲ್ಲ ಎಂದರು.