ಮಹನೀಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಹೇಳಿಕೆ

  ಮಂಡ್ಯದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಸಹಕಾರ, ಸಮನ್ವಯತೆ ಹಾಗೂ ಸಾಮರಸ್ಯದಿಂದ ಆಚರಣೆ ಮಾಡಬೇಕು
  • ಮಹನೀಯರ ಚಿಂತನೆ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು

ಮಂಡ್ಯ: ಜಿಲ್ಲೆಯಲ್ಲಿ ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆ.4ರಂದು ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಎಲ್ಲರ ಸಹಕಾರ, ಸಮನ್ವಯತೆ ಹಾಗೂ ಸಾಮರಸ್ಯದಿಂದ ಆಚರಣೆ ಮಾಡಬೇಕು. ಮಹನೀಯರ ಚಿಂತನೆ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಆಹ್ವಾನ ಪತ್ರಿಕೆ ಗಣ್ಯರು ಹಾಗೂ ಎಲ್ಲ ಅಧಿಕಾರಿಗಳು, ಸಂಘ ಸಂಸ್ಥೆಗೆ ತಲುಪಿಸಬೇಕು. ವೇದಿಕೆಯನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು. ಮಹನೀಯರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಬೇಕು. ಸಾಧನೆ ಮಾಡಿರುವಂತಹ ಸಮುದಾಯದ ಗಣ್ಯರಿಗೆ ಗೌರವ ಸೂಚಿಸಬೇಕು. ವಿಚಾರವಂತರು ಮತ್ತು ಚಿಂತಕರಿಂದ ಸಮುದಾಯದ ಅರಿವಿನ ಬಗ್ಗೆ ಉಪನ್ಯಾಸವನ್ನು ಮಾಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಜಂಟಿ ಕೃಷಿ ನಿರ್ದೇಶಕ ಜಿ.ಸಿ.ಜಯಸ್ವಾಮಿ, ಸಮುದಾಯದ ಮುಖಂಡರಾದ ಅಮ್ಜದ್ ಪಾಷಾ, ರಾಜ್‌ಕುಮಾರ್, ಶ್ರೀನಿವಾಸ್, ಸೋಮಶೇಖರ್, ರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net