ನಾಳೆ ವಿವಿಧ ಸಮಜ ಮುಖಿ ಕಾರ್ಯಕ್ರಮ

ಕೆ.ಎನ್.ದಿವಾಕರ್
ಕೆ.ಎನ್.ದಿವಾಕರ್
Published on

ಪ್ರಮುಖ ಮುಖ್ಯಾಂಶಗಳು

  • ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಮಾಹಿತಿ
  • ಜಿಲ್ಲಾ ಉಸ್ತುವಾರಿ ಸಚಿವ ಸಿಎಸ್‌ಆರ್ ಹುಟ್ಟು ಹಬ್ಬದ ಪ್ರಯುಕ್ತ ಆಯೋಜನೆ
ಮದ್ದೂರು: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಕೊಪ್ಪ 1 ಮತ್ತು 2ನೇ ವೃತ್ತದ ಅವರ ಅಭಿಮಾನಿ ಬಳಗದವತಿಯಿಂದ ಜೂನ್ 1 ರಂದು ಕೊಪ್ಪ ಗ್ರಾಮದ ಶ್ರೀ ಪಟ್ಟಲದಮ್ಮ ದೇವಸ್ಥಾನ ಹಾಗೂ ಶ್ರೀ ಯಂಬಾರ್‌ಜಿಯರ್ ಮಹಾತ್ಮರ ಮಠದ ಆವರಣದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ತಿಳಿಸಿದರು.

ಬೆಳಗ್ಗೆ 9ಗಂಟೆಯಿಂದ ಸಂಜೆ 4ಗಂಟೆಯವರೆಗೆ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದ್ದು ಶಿಬಿರದ ಉದ್ಘಾಟನೆ ಶ್ರೀ ಆದಿ ಚುಂಚನಗಿರಿ ಮಠದ ಕಿರಿಯ ಸ್ವಾಮಿಜಿಗಳಾದ ಶ್ರೀ ಸರ್ತಿನಾಥಸ್ವಾಮಿ ನೆರವೇರಿಸಲಿದ್ದು, ವಿಧಾನ ಪರಿಷತ್‌ನ ಸದಸ್ಯ ದಿನೇಶ್ ಗೂಳೀಗೌಡ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಇದೇ ವೇಳೆ ಆರೋಗ್ಯ ಇಲಾಖೆಯ ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಜೆ 7ಗಂಟೆಗೆ ಜೀ ಕನ್ನಡ ವಾಹಿನಿ ಖ್ಯಾತಿಯ ಸಾಗರ್ ತುರುವೇಕೆರೆ ತಂಡದ ಪ್ರಸಿದ್ಧ ಕಲಾವಿದರಾದ ಚಂದ್ರಪ್ರಭ ಮತ್ತು ವಿನೋದ್ ಗೊಬ್ರಗಾಲರವರಿಂದ ಮನೋರಂಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

ಎಂ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗೀಗೌಡ, ಮನ್‌ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ರಘು, ಮಾಜಿ ಸದಸ್ಯ ತೋಯಜಾಕ್ಷ, ವಿ.ಎಸ್.ಎಸ್.ಎನ್.ಬಿ. ಅಧ್ಯಕ್ಷ ಶಿವಲಿಂಗಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಮೇಶ್‌ಗೌಡ, ಪರ್ವಿಜ್ ಅಹಮದ್, ಗಿರೀಶ್, ನವೀನ್‌ಕುಮಾರ್, ಸಂತೋಷ್ ಕೊಟ್ಟಿಗೆಯಾರ್, ಸುರೇಶ್, ರುದ್ರೇಶ್, ಮುಖಂಡ ಕಿರಂಗೂರು ಅಪ್ಪಾಜಪ್ಪ ಇದ್ದರು.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net