ಜೆಡಿಎಸ್‌ನ 11 ನಿರ್ದೇಶಕರ ಜಯಬೇರಿ

ಪಾಂಡವಪುರ ತಾಲೂಕಿನ ಚಿಟ್ಟನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು. ಜಯಕುಮಾರ್, ಡಿ.ಶಿವಣ್ಣ ಇತರರು ಇದ್ದರು.
ಪಾಂಡವಪುರ ತಾಲೂಕಿನ ಚಿಟ್ಟನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು. ಜಯಕುಮಾರ್, ಡಿ.ಶಿವಣ್ಣ ಇತರರು ಇದ್ದರು.
Published on
ಪಾಂಡವಪುರ: ತಾಲೂಕಿನ ಚಿಟ್ಟನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲ 11 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರಾದ ಜಯಕುಮಾರ್, ಡಿ.ಶಿವಣ್ಣ, ವೆಂಕಟೇಶ್, ದಿವ್ಯ, ಗೌಡಪ್ಪ, ಅಯ್ಯಣ್ಣ, ವೈ ಸಿ ಕೆಂಪೇಗೌಡ, ಹೇಮಾ, ನಾಗ, ಗಿರೀಶ್, ಡಿ.ಎಚ್. ಗೋಪಾಲ, ರೈತಸಂಘ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ವಿಜೇತರಾದ ಜೆಡಿಎಸ್ ಪಕ್ಷದ ಬೆಂಬಲಿತ ನಿರ್ದೇಶಕರನ್ನು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅಭಿನಂದಿಸಿ ಶುಭ ಕೋರಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net