ಶ್ರೀ ಉಗ್ರ ನರಸಿಂಹಸ್ವಾಮಿಗೆ ವಿಶೇಷ ಅಲಂಕಾರ

ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ದೇವರಿಗೆ ಮುತ್ತಂಗಿ ಅಲಂಕಾರ ಮಾಡಲಾಗಿತ್ತು.
ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ದೇವರಿಗೆ ಮುತ್ತಂಗಿ ಅಲಂಕಾರ ಮಾಡಲಾಗಿತ್ತು.
Published on
ಮದ್ದೂರು: ವೈಕುಂಠ ಏಕಾದಶಿ ಅಂಗವಾಗಿ ನಗರ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ದೇವಾಲಯಗಳಲ್ಲಿ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಗರ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲವನ್ನು ಹೂವು ಹಾಗೂ ಹಣ್ಣುಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಸ್ವಾಮಿಗೆ ಮತ್ತಂಗಿ ಅಲಂಕಾರ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಭಕ್ತಾದಿಗಳು ದೇವರ ದರ್ಶನ ಪ್ರದರ್ಶನ ಪಡೆದಿದರು. ದಾನಿಗಳು ಭಕ್ತಾದಿಗಳಿಗೆ ಬಾದಾಮಿ ಹಾಲು, ಕೆಸರಿ ಬಾತ್, ಉಪ್ಪಿಟ್ಟು ಸೇರಿದಂತೆ ವಿವಿಧ ರೀತಿಯ ಪ್ರಸಾದಗಳನ್ನು ವಿತರಣೆ ಮಾಡಿದರು.
ನಗರದ ಪುರಾಣ ಪ್ರಸಿದ್ಧ ಶ್ರೀ ವರದರಾಜು ಸ್ವಾಮಿ, ಪಟ್ಟಾಭಿರಾಮ, ಶ್ರೀ ಹೊಳೆ ಆಂಜನೇಯಸ್ವಾಮಿ, ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ಹಾಗೂ ತಾಲೂಕಿನ ಆಬಲವಾಡಿ ಗ್ರಾಮದ ಶ್ರೀ ತೋಪಿನ ತಿಮ್ಮಪ್ಪ ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಂಡು ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net