ಇದಕ್ಕೂ ಮುನ್ನ ಶಿಬಿರ, ಸೈನಿಕರ ಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ರಕ್ತದಾನ ಮಹಾದಾನ. ರಕ್ತದಾನ ಮಾಡುವುದರಿಂದ ಸಮಾಜಕ್ಕೆ ಕೊಡುಗೆ ನೀಡುವುದರ ಜತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ರಕ್ತದಾನ ಮಾಡುವುದರಿಂದ ನಿಶಕ್ತಿ, ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಅಪನಂಬಿಕೆ ಇತ್ತು. ಅದನ್ನು ಹೋಗಲಾಡಿಸಿ ಇದೀಗ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರುತ್ತಿರುವುದು ಶ್ಲಾಘನೀಯ ಎಂದರು.