ಎಸ್‌ಐಆರ್ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ: ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಪರಿಶೀಲನೆ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮರ್ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮರ್ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮಾಹಿತಿ ಸಂಗ್ರಹ
  • ನಿಗದಿತ ಗುರಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ
ಮಂಡ್ಯ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಪರಿಶೀಲನೆ ನಡೆಸಿದರು. ಅತ್ಯಂತ ವ್ಯವಸ್ಥಿತ, ಪಾರದರ್ಶಕ ಮತ್ತು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಜಿಲ್ಲಾಡಳಿತ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಪೂರ್ವ ಮುದ್ರಿತ ನಮೂನೆಗಳನ್ನು ವಿತರಿಸಿ ಗಣತಿ ಕಾರ್ಯವನ್ನು ಚುರುಕಾಗಿ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರರು ಸಭೆಗಳನ್ನು ನಡೆಸಿ ನಿಗದಿತ ಗುರಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಕ್ರಿಯೆಯ ಪ್ರಗತಿಯ ಬಗ್ಗೆ ಜಿಲ್ಲೆಯ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಅಧಿಕೃತವಾಗಿ ಮಾಹಿತಿ ನೀಡಬೇಕು. ಮನೆ-ಮನೆ ಸಮೀಕ್ಷೆ, ಕರಡು ಪಟ್ಟಿ ಪ್ರಕಟಣೆ ಮತ್ತು ಆಕ್ಷೇಪಣೆ ಸಲ್ಲಿಕೆ ದಿನಾಂಕಗಳ ವಿವರಗಳನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಹಾಗೂ ಪರಿಶೀಲಿಸುವ ಪ್ರಕ್ರಿಯೆಯಲ್ಲಿ ಶೇ.100 ಪ್ರಗತಿ ಸಾಧಿಸಲಾಗಿದೆ. ಡಿಜಿಟಲ್ ಕಾರ್ಯ ಶೇ.70 ಪ್ರಗತಿ ಆಗಿದೆ. ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಬಿಎಲ್‌ಒಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಗಮನಿಸಲು ನೋಡಲ್ ಅಧಿಕಾರಿಗಳು ನೇಮಕ ಮಾಡಲಾಗಿದೆ. ಒಟ್ಟಾರೆ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತ, ಪಾರದರ್ಶಕವಾಗಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net