ಪರಿಸರ ಸಂರಕ್ಷಣೆಗೆ ನೀರು ಮಿತ ಬಳಕೆ ಅವಶ್ಯ

ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಪ್ರಾಂಶುಪಾಲ ಡಾ.ನಿಶಾಂತ್ ಎ ನಾಯ್ಡು, ಇಕೋ ಕ್ಲಬ್‌ನ ಸಂಯೋಜಕರಾದ ಐಶ್ವರ್ಯಾ ಇತರರು ಇದ್ದರು.
ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಪ್ರಾಂಶುಪಾಲ ಡಾ.ನಿಶಾಂತ್ ಎ ನಾಯ್ಡು, ಇಕೋ ಕ್ಲಬ್‌ನ ಸಂಯೋಜಕರಾದ ಐಶ್ವರ್ಯಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಂಶುಪಾಲ ಡಾ.ನಿಶಾಂತ್ ಎ ನಾಯ್ಡು ಕಿವಿಮಾತು
ಪಾಂಡವಪುರ: ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾಲೇಜಿನ ಇಕೋ ಕ್ಲಬ್, ಎನ್‌ಎಸ್‌ಎಸ್ ಘಟಕ, ಐಕ್ಯೂಎಸಿ ಹಾಗೂ ಐಐಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು 50ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ನೀರೆರೆದರು. ಈ ಮೂಲಕ ಕಾಲೇಜು ಆವರಣದಲ್ಲಿ ಹಸಿರು ವಾತಾವರಣ ನಿರ್ಮಿಸಲು ಮುಂದಾದರು. ಈ ವೇಳೆ ಇಕೋ ಕ್ಲಬ್‌ನ ಸಂಯೋಜಕಿ ಐಶ್ವರ್ಯಾ, ಪ್ಲಾಸ್ಟಿಕ್ ಬದಲು ಬಟ್ಟೆ ಬ್ಯಾಗ್ ಬಳಸುವಂತೆ ವಿದ್ಯಾರ್ಥಿಗಳಲ್ಲಿ ಪ್ರತಿಜ್ಞೆ ಮಾಡಿಸಿದರು.
ಪ್ರಾಂಶುಪಾಲ ಡಾ.ನಿಶಾಂತ್ ಎ ನಾಯ್ಡು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಎನ್ನುವುದು ಗಿಡ ನೆಡುವುದಕಷ್ಟೇ ಸೀಮಿತವಾಗಬಾರದು. ಪರಿಸರ ಸಂರಕ್ಷಣೆಗೆ ನೀರು ಮಿತ ಬಳಕೆ ಕೂಡ ಅವಶ್ಯವಾಗಿದೆ. ಹಾಗಾಗಿ ನೀರಿನ್ನು ಮಿತ ಬಳಕೆ ಮಾಡಬೇಕು ಎಂದರು.
ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು, ವಿದ್ಯಾರ್ಥಿ ಪ್ರತಿನಿಧಿಗಳು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net