ಹುಲಿ ನೆಲೆಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಹೊಣೆ

ಹಲಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸಮೀಪದ ಬ್ಯಾಡರಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ’ವನ್ಯಜೀವಿ ಸಂರಕ್ಷಣೆಯಲ್ಲಿ ಹುಲಿ ಉಳಿಸುವ ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ವನೋದಯ ಸ್ವಯಂ ಸೇವಾ ಸಂಸ್ಥೆ ಪ್ರಕೃತಿ ಶಿಕ್ಷಕ ವಿ.ತೇಜಸ್ ಮಾತನಾಡಿದರು. ಶೇಖರ್ ದತ್ತಾತ್ರಿ, ಬಿ.ಸಿ.ರವಿ, ಎಂ.ಚೇತನತ್ರೀ, ರಂಜನ್, ಭವ್ಯಾ ಇತರರಿದ್ದರು.
ಹಲಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸಮೀಪದ ಬ್ಯಾಡರಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ’ವನ್ಯಜೀವಿ ಸಂರಕ್ಷಣೆಯಲ್ಲಿ ಹುಲಿ ಉಳಿಸುವ ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ವನೋದಯ ಸ್ವಯಂ ಸೇವಾ ಸಂಸ್ಥೆ ಪ್ರಕೃತಿ ಶಿಕ್ಷಕ ವಿ.ತೇಜಸ್ ಮಾತನಾಡಿದರು. ಶೇಖರ್ ದತ್ತಾತ್ರಿ, ಬಿ.ಸಿ.ರವಿ, ಎಂ.ಚೇತನತ್ರೀ, ರಂಜನ್, ಭವ್ಯಾ ಇತರರಿದ್ದರು.
Published on

ವನೋದಯ ಸ್ವಯಂ ಸೇವಾ ಸಂಸ್ಥೆ ಪ್ರಕೃತಿ ಶಿಕ್ಷಕ ವಿ.ತೇಜಸ್ ಅಭಿಮತ

ಹಲಗೂರು: ದೇಶದಲ್ಲಿ ಅವನತಿಯ ಹಾದಿಯಲ್ಲಿರುವ ಹುಲಿಗಳ ಸಂತತಿಯನ್ನು ಮತ್ತೆ ಹೆಚ್ಚಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಉಳಿಸಿಕೊಳ್ಳುವ ಅವಕಾಶಗಳು ವಿಪುಲವಾಗಿವೆ. ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಜತೆಗೆ ಕಾಡಂಚಿನ ಗ್ರಾಮಗಳ ನಿವಾಸಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಿದರೆ ಹುಲಿಗಳ ನೆಲೆಗಳ ಸಂರಕ್ಷಣೆ ಸಾಧ್ಯ ಎಂದು ವನೋದಯ ಸ್ವಯಂ ಸೇವಾ ಸಂಸ್ಥೆ ಪ್ರಕೃತಿ ಶಿಕ್ಷಕ ವಿ.ತೇಜಸ್ ಅಭಿಪ್ರಾಯಪಟ್ಟರು.
ಹಲಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸಮೀಪದ ಬ್ಯಾಡರಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ’ವನ್ಯಜೀವಿ ಸಂರಕ್ಷಣೆಯಲ್ಲಿ ಹುಲಿ ಉಳಿಸುವ ದಾರಿ’ ಕುರಿತು ಉಪನ್ಯಾಸ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಂದು ಕಾಡಿನಲ್ಲಿ ಹುಲಿ ಸಂತತಿ ವಾಸವಾಗಿದೆ ಎಂದರೆ ಆ ಕಾಡು ಸಮೃದ್ಧವಾಗಿದೆ ಎಂದರ್ಥ. ಹುಲಿಗಳ ಆಹಾರಕ್ಕಾಗಿ ವರ್ಷಕ್ಕೆ ಸುಮಾರು 50ಕ್ಕೂ ಹೆಚ್ಚು ಬಲಿ ಪ್ರಾಣಿಗಳು ಬೇಕಾಗಲಿವೆ. ಹುಲಿ ವಾಸಿಸುವ ಕಾಡಿನಲ್ಲಿ ಕಾಟಿ, ಜಿಂಕೆ, ಕೃಷ್ಣಮೃಗ, ಕಾಡು ಹಂದಿ ಸೇರಿದಂತೆ ಹಲವಾರು ಬಗೆಯ ಬಲಿ ಪ್ರಾಣಿಗಳು ಸಮೃದ್ಧವಾಗಿ ಇದ್ದಾಗ ಮಾತ್ರ ಹುಲಿಗಳ ಸಂತತಿ ಹೆಚ್ಚಲು ಸಾಧ್ಯ ಎಂದರು.
ವನೋದಯ ಸಂಸ್ಥೆಯ ಮಹೇಶ್‌ಕುಮಾರ್ ಮಾತನಾಡಿ, ಮಾನವನ ದುರಾಸೆಯಿಂದಾಗಿ ಸಂರಕ್ಷಿತ ಕಾಡು ನಾಶ ಆಗುತ್ತಿದ್ದು, ಹುಲಿಯ ನೆಲೆಗಳು ಅಪಾಯದ ಅಂಚಿಗೆ ತಲುಪುತ್ತಿವೆ. ಕಾಡಿನಲ್ಲಿರುವ ಹಂದಿ, ಜಿಂಕೆ ಮುಂತಾದ ಪ್ರಾಣಿಗಳನ್ನು ಕಳ್ಳ ಬೇಟೆಗಾರರು ಕೊಂದು ಹಾಕುತ್ತಿದ್ದಾರೆ. ದನಗಾಹಿಗಳು ಹಸುಗಳಿಗೆ ಹೊಸ ಹುಲ್ಲು ಚಿಗರಲಿ ಎಂದು ಕಾಡಿಗೆ ಬೆಂಕಿ ಹಚ್ಚುತ್ತಿದ್ದಾರೆ. ಇದರಿಂದಾಗಿ ಕಾಡು ನಾಶದ ಜತೆಗೆ ಹಲವು ಬಗೆಯ ವನ್ಯಜೀವಿಗಳು ನಾಶವಾಗುತ್ತಿವೆ. ಪರಿಣಾಮ ಹುಲಿಗಳು ದೈನಂದಿನ ಆಹಾರ ಕೊರತೆಯಿಂದ ಮೃತಪಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಶೇಖರ್ ದತ್ತಾತ್ರಿ ತಯಾರಿಸಿರುವ ಸುಮಾರು 45 ನಿಮಿಷಗಳ ಅವಧಿಯ ಹುಲಿಗಳ ಜೀವನ ಶೈಲಿ, ಹುಲಿಗಳು ಎದುರಿಸುತ್ತಿರುವ ಸಮಸ್ಯೆಗಳು ಕುರಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು. ಹುಲಿ ಜೀವನ ಕುರಿತು ಕುತೂಹಲಕಾರಿ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಪಡೆದುಕೊಂಡರು.
ರಾಷ್ಟ್ರೀಯ ಸೇವಾ ಶಿಬಿರ ಅಧಿಕಾರಿ ಬಿ.ಸಿ.ರವಿ, ಉಪನ್ಯಾಸಕರಾದ ಎಂ.ಚೇತನಶ್ರೀ, ರಂಜನ್, ಭವ್ಯ ವನೋದಯ ಸಂಸ್ಥೆ ಸ್ವಯಂ ಸೇವಕ ಮಹೇಶ್‌ಕುಮಾರ್, ಶಿವರಾಜು, ಮಾಯಪ್ಪ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net