ಕ್ಯಾಂಟರ್ ಡಿಕ್ಕಿಯಾಗಿ ಮಹಿಳೆ ಸಾವು

ಶಾರದಮ್ಮ
ಶಾರದಮ್ಮ
Published on

ಮಳವಳ್ಳಿ: ಪಟ್ಟಣದ ದೊಡ್ಡಕೆರೆ ಬಳಿಯ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಕ್ಯಾಂಟರ್‌ವೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಪಟ್ಟಣದ ಮಡಿವಾಳರ ಬೀದಿಯ ನಿವಾಸಿ ಲೇ.ಜಯರಾಮು ಅವರ ಪತ್ನಿ ಶಾರದಮ್ಮ(55) ಮೃತರು. ಅಮಾವಾಸ್ಯೆ ಹಿನ್ನೆಲೆಯಲ್ಲಿ ಯೋಗ ತರಗತಿ ಮುಗಿಸಿ ಯೋಗಶಿಕ್ಷಕ ದೊಡ್ಡಣ್ಣ ಅವರ ಸ್ಕೂಟರ್‌ನಲ್ಲಿ ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಸ್ಕೂಟರ್‌ನಿಂದ ಇಳಿಯುತ್ತಿರುವಾಗ ಹಿಂಬದಿಯಿಂದ ವೇಗವಾಗಿ ಬಂದ ಕ್ಯಾಂಟರ್‌ವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಶಾರದಮ್ಮ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಸ್ಕೂಟರ್ ಸವಾರ ದೊಡ್ಡಣ್ಣ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದರ ಪೊಲೀಸರು ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಅಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದು, ಅಪಘಾತವೆಸಗಿ ಪರಾರಿಯಾಗಿದ್ದ ಕ್ಯಾಂಟರ್ ವಶಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net