ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದ ಪಾರ್ವತಮ್ಮ (53) ಮೃತರು. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ಇವರು, ಮತ್ತೊಬ್ಬ ಸಂಬಂಧಿಕರ ಮನೆಗೆಂದು ತಮ್ಮ ಸೋದರನ ಪುತ್ರ ಸಂತೋಷ್ ಅವರ ಜತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.