ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ: ಕೃಷಿ ವಿವಿ ಕುಲಪತಿ ಡಾ.ಕೆ.ಸಿ.ನಾರಾಯಣಸ್ವಾಮಿ ಹೇಳಿಕೆ

ಮಂಡ್ಯ ತಾಲೂಕು ವಿ.ಸಿ ಫಾರಂನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.
ಮಂಡ್ಯ ತಾಲೂಕು ವಿ.ಸಿ ಫಾರಂನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ವಿ.ಸಿ ಫಾರಂನಲ್ಲಿ ಪರಿಸರ ದಿನಾಚರಣೆ
  • ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಆಯೋಜನೆ
ಮಂಡ್ಯ: ಹವಾಮಾನ ಬದಲಾವಣೆ, ಅರಣ್ಯ ನಾಶ, ನೀರಿನ ಕೊರತೆ ಹಾಗೂ ಜೀವ ವೈವಿಧ್ಯತೆಯ ಕ್ಷೀಣತೆಯಿಂದಾಗಿ ವಿಶ್ವದ ಸಮತೋಲನವನ್ನು ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ನಾಗರಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಾದ ಅಗತ್ಯವಿದೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ವಿ.ಸಿ ಫಾರಂನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪರಿಸರ ಸಂರಕ್ಷಣೆ, ಜೀವ ವೈವಿಧ್ಯತೆ ಸಂರಕ್ಷಣೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಇಂದಿನ ಕಾಲಘಟ್ಟದಲ್ಲಿ ಮಾನವಕುಲ ಎದುರಿಸುತ್ತಿರುವ ಅತ್ಯಂತ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ ಎಂದರು.
ಶಿಕ್ಷಣ ಸಂಸ್ಥೆಗಳು ಕೇವಲ ಜ್ಞಾನ ನೀಡುವ ಕೇಂದ್ರಗಳಾಗದೇ, ಪರಿಸರ ಪ್ರಜ್ಞೆಯನ್ನು ಬೆಳೆಸುವ ಜವಾಬ್ದಾರಿಯನ್ನೂ ಹೊತ್ತಿವೆ. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಒಬ್ಬ ವಿದ್ಯಾರ್ಥಿ ಒಂದು ಗಿಡ ಎಂಬ ಪರಿಕಲ್ಪನೆಯನ್ನು ಅಳವಡಿಸಿಕೊಂಡು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ನಾಗರಹೊಳೆ ಅರಣ್ಯ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ನವೀನ್ ರಾವತ್ ‘ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶಿಕ್ಷಣ ನಿರ್ದೇಶಕ ಡಾ.ಎನ್.ಶಿವಕುಮಾರ್, ವಲಯ ಕೃಷಿ ಸಂಶೋಧನಾ ನಿರ್ದೇಶಕ ಡಾ.ಬಿ.ಎಸ್. ಬಸವರಾಜು, ಡಾ.ಕಮಲಬಾಯಿ ಕೂಡಿಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net