ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಅರಿವು

ಕೆ.ಆರ್.ಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಬಿ.ಜಯರಾಮ್ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಮಾಡಬಹುದಾದ ಪ್ರಥಮ ಚಿಕಿತ್ಸೆ ವಿಧಾನಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.
ಕೆ.ಆರ್.ಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಬಿ.ಜಯರಾಮ್ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಮಾಡಬಹುದಾದ ಪ್ರಥಮ ಚಿಕಿತ್ಸೆ ವಿಧಾನಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.
Published on
ಕೆ.ಆರ್.ಸಾಗರ: ಕೆ.ಆರ್.ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಬುಧವಾರ ಪ್ರಥಮ ಚಿಕಿತ್ಸೆ ಕುರಿತು ಕಾಲೇಜು ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆ.ಆರ್.ಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಬಿ.ಜಯರಾಮ್, ವಿದ್ಯಾರ್ಥಿಗಳಿಗೆ ವಿವಿಧ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಮಾಡಬಹುದಾದ ಪ್ರಥಮ ಚಿಕಿತ್ಸೆ ವಿಧಾನಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.
ಹೃದಯಾಘಾತಕ್ಕೆ ಒಳಗಾದವರಿಗೆ ಸಿಪಿಆರ್ ಮಾಡುವ ವಿಧಾನ, ಹಾವು ಕಡಿತ, ಹುಚ್ಚು ನಾಯಿ ಕಡಿತ, ಜೇನುನೊಣ ಕಡಿತಕ್ಕೆ ಒಳಗಾದವರಿಗೆ ನೀಡುವ ಪ್ರಥಮ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಿದರು. ಬೆಂಕಿ ಅವಘಡ ಹಾಗೂ ನೀರಿನಲ್ಲಿ ಮುಳುಗಿದವರನ್ನು ಅಪಾಯದಿಂದ ರಕ್ಷಿಸುವ ಸುರಕ್ಷಿತ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಾಂಶುಪಾಲೆ ಡಾ.ಎಚ್.ವಿ. ಶಿಲ್ಪಾಶ್ರೀ, ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಪಿ.ಇ.ಇಂದಿರಾ, ಐಕ್ಯೂಎಸಿ ಸಂಚಾಲಕ ಎನ್.ಪ್ರಸಾದ್, ಕೆ.ಆರ್.ಎಸ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಚಂದನ್, ಪ್ರಾಧ್ಯಾಪಕರು, ಸಿಬ್ಬಂದಿ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net