ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಗಂಜಿಗೆರೆ ಮಹೇಶ್ ಮಾತನಾಡಿ, ಮಹಿಳೆಯರು ಜ್ಞಾನ-ವಿಜ್ಞಾನ, ಕಾರ್ಮಿಕ ಕ್ಷೇತ್ರ, ಸೇವಾ ಕ್ಷೇತ್ರ, ಉದ್ಯಮ, ಪುರುಷರಿಗಷ್ಟೇ ಎಂದೇ ನಂಬಲಾದ ವೃತ್ತಿಗಳಲ್ಲೂ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಮಹಿಳೆಯರು ಶಿಕ್ಷಣ, ಉದ್ಯೋಗ, ವೈಜ್ಞಾನಿಕ ಸಂಶೋಧನೆ, ಸಮಾಜಸೇವಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಮಹಿಳೆಯರು ಪುರುಷರಂತೆ ಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೂಡ ವ್ಯಾಪಾರ, ಕೈಗಾರಿಕೆ ಯಂತಹ ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಉತ್ತಮ ಸ್ಥಾನಮಾನ ಗಳಿಸಿದ್ದಾರೆ ಎಂದರು.