ವೀರಾಂಜನೇಯಸ್ವಾಮಿಗೆ ವಿವಿಧ ಬಗೆಯ ಹಣ್ಣುಗಳು ಹಾಗೂ ವೀಳ್ಯದೆಲೆ ಹಾರಗಳಿಂದ ಅಲಂಕಾರ ಮಾಡಲಾಗಿತ್ತು. ದೇವಾಲಯದ ಆವರಣವನ್ನು ತಳಿರು-ತೋರಣಗಳಿಂದ ಅಲಂಕರಿಸಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ವೀರಾಂಜನೇಯಸ್ವಾಮಿಗೆ ಲೋಕಕಲ್ಯಾಣಾರ್ಥವಾಗಿ ಮಹಾಭಿಷೇಕ ನೆರವೇರಿಸಲಾಯಿತು. ನಂತರ ರಾಮತಾರಕ ಹೋಮ ನೆರವೇರಿಸಲಾಯಿತು. ಅರ್ಚಕ ಚಂದುಭಾರದ್ವಾಜ್ ನೇತೃತ್ವದಲ್ಲಿ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಹನುಮನ ಸೇವಾ ಬಳಗದ ವತಿಯಿಂದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.