ಯಂಗ್ ಚಾಲೆಂಜರ್ಸ್‌ ಸ್ಪೋರ್ಟ್ಸ್ ಪ್ರಥಮ

ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡದ ಕ್ರೀಡಾಪಟುಗಳು ಬಹುಮಾನ ಸ್ವೀಕರಿಸಿದರು.
ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡದ ಕ್ರೀಡಾಪಟುಗಳು ಬಹುಮಾನ ಸ್ವೀಕರಿಸಿದರು.
Published on
ಪಾಂಡವಪುರ: ತಾಲೂಕಿನ ಕ್ಯಾತನಹಳ್ಳಿಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಕ್ಯಾತನಹಳ್ಳಿಯ ಯಂಗ್ ಚಾಲೆಂಜರ್ಸ್‌ ಸ್ಪೋರ್ಟ್ಸ್ ತಂಡ ಪ್ರಥಮ ಬಹುಮಾನ ತನ್ನದಾಗಿಸಿಕೊಂಡಿತ್ತು.
ಯಂಗ್ ಚಾಲೆಂಜರ್ಸ್‌ ಸ್ಪೋರ್ಟ್ಸ್ ಮತ್ತು ಕ್ರೀಡಾ ಒಕ್ಕೂಟ ಕ್ಯಾತನಹಳ್ಳಿ, ಮಂಡ್ಯ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ ದರ್ಶನ್ ಪುಟ್ಟಣ್ಣಯ್ಯ ಸಾರಥ್ಯದಲ್ಲಿ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ, ಸಮಾಜ ಧನ್ವಂತರಿ ಕೆ.ವೈ.ಶ್ರೀನಿವಾಸ್ ಹಾಗೂ ಹಿರಿಯ ಕ್ರೀಡಾಪಟುಗಳ ಸವಿನೆನಪಿಗಾಗಿ ಶನಿವಾರ ಹಾಗೂ ಭಾನುವಾರ ಮಂಡ್ಯ, ಹಾಸನ ಮತ್ತು ಮೈಸೂರು ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪಂದ್ಯಾವಳಿ ಆಯೋಜಿಸಲಾಗಿತ್ತು.
ಯಂಗ್ ಚಾಲೆಂಜರ್ಸ್‌ ಸ್ಪೋರ್ಟ್ಸ್ ತಂಡ ಕ್ಯಾತನಹಳ್ಳಿ ಪ್ರಥಮ ಬಹುಮಾನವಾಗಿ 75 ಸಾವಿರ ನಗದು, ಪಾರಿತೋಷಕ, ದ್ವಿತೀಯ ಸ್ಥಾನ ಪಡೆದ ಮೈಸೂರಿನ ಮೇಟಗಳ್ಳಿ ಸಂಯುಕ್ತ ತಂಡ 40 ಸಾವಿರ ನಗದು ಮತ್ತು ಪಾರಿತೋಷಕ, ತೃತೀಯ ಸ್ಥಾನ ಪಡೆದ ನಾಗನಹಳ್ಳಿಯ ಲಕ್ಷ್ಮೀದೇವಿ ತಂಡ 20 ಸಾವಿರ ನಗದು ಮತ್ತು ಪಾರಿತೋಷಕ ಹಾಗೂ ನಾಲ್ಕನೇ ಬಹುಮಾನಕ್ಕೆ ತೃಪ್ತಿಪಟ್ಟ ತಾಲೂಕಿನ ಕೆನ್ನಾಳು ಗ್ರಾಮದ ಕದಂಬ ತಂಡ 15 ಸಾವಿರ ನಗದು ಹಾಗೂ ಪಾರಿತೋಷಕ ತಮ್ಮದಾಗಿಸಿಕೊಂಡಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ವಹಿಸಿದ್ದರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮುಖಂಡರಾದ ಗೌಡೇಗೌಡ, ಕೆ.ಟಿ.ಗೋವಿಂದೇಗೌಡ, ತುಳಸೀದಾಸ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net