ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕು ಮಾದೇಗೌಡನದೊಡ್ಡಿ ಗ್ರಾಮದ ಚಂದ್ರು ಎಂಬುವರ ಪುತ್ರ ಅರುಣ್ ಕುಮಾರ್ (23) ಮೃತ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್ ಭಾನುವಾರ 9 ಜನ ಸ್ನೇಹಿತರೊಂದಿಗೆ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದ. ದೇವರಿಗೆ ಪೂಜೆ ಸಲ್ಲಿಸಿ ನಂತರ ಮಧ್ಯಾಹ್ನ ನದಿಯಲ್ಲಿ ಈಜಲು ಇಳಿದಾಗ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿದ್ದಾನೆ. ನುರಿತ ಈಜುಗಾರರ ಸಹಾಯದಿಂದ ಭಾನುವಾರ ರಾತ್ರಿ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಯಿತು. ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರರಿಗೆ ನೀಡಲಾಯಿತು. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.