ಆರೋಗ್ಯ ಸೇವೆಗೆ ಆಯುಷ್ಮಾನ್ ಕೇಂದ್ರ ಸಹಕಾರಿ

ಶಾಸಕ ಕೆ.ಎಂ.ಉದಯ್ ಹೇಳಿಕೆ
ಬಿದರಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ಎ.ಎಸ್.ರಾಜೀವ್, ಬಿ.ಬಸವರಾಜು, ರವಿಶಂಕರ್,  ಹರ್ಷ, ಕೆಂಚೇಗೌಡ, ಬೊಮ್ಮೇಗೌಡ ಇತರರಿದ್ದರು.
ಬಿದರಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ಎ.ಎಸ್.ರಾಜೀವ್, ಬಿ.ಬಸವರಾಜು, ರವಿಶಂಕರ್, ಹರ್ಷ, ಕೆಂಚೇಗೌಡ, ಬೊಮ್ಮೇಗೌಡ ಇತರರಿದ್ದರು.
Published on: 

ಕೆ.ಎಂ.ದೊಡ್ಡಿ: ಗ್ರಾಮೀಣ ಜನರಿಗೆ ಪ್ರಾಥಮಿಕ ಹಂತದಲ್ಲೇ ತಮ್ಮ ಗ್ರಾಮದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರ ಮಹತ್ವದ ಹೆಜ್ಜೆಯಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಸಮೀಪದ ಬಿದರಹಳ್ಳಿ ಮತ್ತು ಕರಡಕೆರೆ ಗ್ರಾಮದಲ್ಲಿ ಸುಮಾರು 1.30 ಕೋಟಿ ರೂ.ವೆಚ್ಚದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ಹಿಂದುಳಿದ ಭಾಗಗಳಲ್ಲಿ ವಾಸಿಸುವ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ದೂರದ ಪಟ್ಟಣ ಹಾಗೂ ನಗರ ಪ್ರದೇಶದಲ್ಲಿನ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿಯಿದ್ದು, ಅದನ್ನು ನಿವಾರಿಸಲು ಆಯುಷ್ಮಾನ್ ಆರೋಗ್ಯ ಕೇಂದ್ರ ಸಹಕಾರಿಯಾಗಲಿದೆ ಎಂದರು.

ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಉಚಿತ ತಪಾಸಣೆ, ವೈದ್ಯಕೀಯ ಸಲಹೆ, ರಕ್ತದೊತ್ತಡ, ಮಧುಮೇಹ ಹಾಗೂ ಕ್ಯಾನ್ಸರ್ ತಪಾಸಣೆ ನಡೆಸಲಾಗುವುದು. ಅಗತ್ಯವಿರುವ ಔಷಧ ಹಾಗೂ ವೈದ್ಯಕೀಯ ಸಾಮಗ್ರಿಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಗರ್ಭಿಣಿಯರ ಆರೋಗ್ಯ ತಪಾಸಣೆ, ಗರ್ಭಾವಸ್ಥೆಯ ಆರೈಕೆ, ಸುರಕ್ಷಿತ ಹೆರಿಗೆಗೆ ಅಗತ್ಯ ಮಾರ್ಗದರ್ಶನ ಹಾಗೂ ಮಕ್ಕಳಿಗೆ ಲಸಿಕೆ ಸ್ಥಳೀಯವಾಗಿಯೇ ದೊರೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಬಿ.ಬಸವರಾಜು, ತಾಲೂಕು ವೈದ್ಯಾಧಿಕಾರಿ ರವಿಶಂಕರ್, ಆರೋಗ್ಯ ಇಲಾಖೆ ಸಿಬ್ಬಂದಿ ಹರ್ಷ, ಮುಖಂಡರಾದ ಯಡಹಗನಹಳ್ಳಿ ಕೆಂಚೇಗೌಡ, ಬೊಮ್ಮೇಗೌಡ, ಮೊಳ್ಳಲಿಂಗೇಗೌಡ, ಕೆ.ಶೆಟ್ಟಹಳ್ಳಿ ರಘು, ಮನು, ಬೋರೇಗೌಡ, ಚಿಕ್ಕಹನುಮಯ್ಯ, ವೆಂಕಟೇಶ್, ಶ್ರೀಧರ್, ಗೋವಿಂದ, ಪ್ರೇಮರಾಜ್, ಹನುಮೇಶ, ನಿಂಗಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net